ದೇಶ

ಉದಾರವಾದಿ ತಂದೆಯ ಮಗನಾಗಿರುವುದಕ್ಕೆ ಹೆಮ್ಮೆ: ರಾಹುಲ್ ಗಾಂಧಿ

ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಪುಣ್ಯತಿಥಿ ಅಂಗವಾಗಿ ಅವರ ಪುತ್ರ ಹಾಗೂ ಕಾಂಗ್ರೆಸ್ ಯುವ ನಾಯಕ ರಾಹುಲ್ ಗಾಂಧಿ ತಂದೆಗೆ ಗೌರವ ಶ್ರದ್ದಾಂಜಲಿ ಸಲ್ಲಿಸಿದ್ದಾರೆ.

ಉದಾರವಾದಿ ತಂದೆಯ ಮಗನಾಗಿರುವುದಕ್ಕೆ ಹೆಮ್ಮೆ: ರಾಹುಲ್ ಗಾಂಧಿ
ರಾಹುಲ್ ಗಾಂಧಿ-ರಾಜೀವ್ ಗಾಂಧಿ
Published On :

ನವದೆಹಲಿ: ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಪುಣ್ಯತಿಥಿ ಅಂಗವಾಗಿ ಅವರ ಪುತ್ರ ಹಾಗೂ ಕಾಂಗ್ರೆಸ್ ಯುವ ನಾಯಕ ರಾಹುಲ್ ಗಾಂಧಿ ತಂದೆಗೆ ಗೌರವ ಶ್ರದ್ದಾಂಜಲಿ ಸಲ್ಲಿಸಿದ್ದಾರೆ. 

ಈ ಕುರಿತು ಟ್ವೀಟ್ ಮಾಡಿರುವ ರಾಹುಲ್ ನಿಜವಾದ ದೇಶಭಕ್ತ, ಉದಾರವಾದಿ ಮತ್ತು ಲೋಕೋಪಕಾರಿ ತಂದೆಯ ಮಗನಾಗಿರುವುದಕ್ಕೆ ನನಗೆ ಹೆಮ್ಮೆ ಇದೆ ಸಂತೋಷವಿದೆ. 

ಪ್ರಧಾನ ಮಂತ್ರಿಯಾಗಿ ರಾಜೀವ್ ಗಾಂಧಿ ದೇಶವನ್ನು ಪ್ರಗತಿಯ ಹಾದಿಯಲ್ಲಿ ಮುನ್ನಡೆಸಿದ್ದಾರೆ. ರಾಷ್ಟ್ರವನ್ನು ಸಬಲೀಕರಣಗೊಳಿಸಲು ಅವರು ಅನೇಕ ಅಗತ್ಯ, ಪೂರಕ ಕ್ರಮ ಕೈಗೊಂಡಿದ್ದಾರೆ. ಪುಣ್ಯ ತಿಥಿಯಂದು ಅವರಿಗೆ ಪ್ರೀತಿ ಮತ್ತು ಕೃತಜ್ಞತೆಯಿಂದ ವಂದಿಸುತ್ತೇನೆ ಎಂದು ರಾಹುಲ್ ಬರೆದುಕೊಂಡಿದ್ದಾರೆ.

ರಾಜೀವ್ ಗಾಂಧಿ ಅವರು 1991 ರ ಮೇ. 21 ರಂದು ಚುನಾವಣಾ ಪ್ರಚಾರಕ್ಕಾಗಿ ತಮಿಳುನಾಡಿನ ಶ್ರೀಪೆರಂಬುದೂರ್ ಗೆ ಬಂದಿದ್ದ ಸಮಯದಲ್ಲಿ ಎಲ್ ಟಿಟಿಇ ಮಾನವ ಬಾಂಬ್ ದಾಳಿಗೆ ಮಾಜಿ ಪ್ರಧಾನಿ ಬಲಿಯಾಗಿದ್ದರು. 

ರಾಜೀವ್ ಗಾಂಧಿ ಪುಣ್ಯತಿಥಿಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ಇತರೆ ಅನೇಕ ನಾಯಕರು ಅವರಿಗೆ ಗೌರವ ಶ್ರದ್ದಾಂಜಲಿ ಸಲ್ಲಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.