ವಲಸಿಗ ಕಾರ್ಮಿಕರಿಗೆ ಸಹಾಯ ಮಾಡುತ್ತಿರುವವರನ್ನು ಉತ್ತರ ಪ್ರದೇಶ ಸರ್ಕಾರ ಜೈಲಿಗಟ್ಟುತ್ತಿದೆ: ಪ್ರಿಯಾಂಕ
ವಲಸಿಗ ಕಾರ್ಮಿಕರಿಗಾಗಿ 1,000 ಬಸ್ ಗಳ ವ್ಯವಸ್ಥೆ ವಿಷಯವಾಗಿ ಉತ್ತರ ಪ್ರದೇಶ ಸರ್ಕಾರ ಹಾಗೂ ಪ್ರಿಯಾಂಕ ವಾಧ್ರ ನಡುವೆ ಆರೋಪ-ಪ್ರತ್ಯಾರೋಗಳ ನಂತರ ಈಗ ಪ್ರಿಯಾಂಕ ವಾಧ್ರ ಉತ್ತರ ಪ್ರದೇಶ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

ಲಖನೌ: ವಲಸಿಗ ಕಾರ್ಮಿಕರಿಗಾಗಿ 1,000 ಬಸ್ ಗಳ ವ್ಯವಸ್ಥೆ ವಿಷಯವಾಗಿ ಉತ್ತರ ಪ್ರದೇಶ ಸರ್ಕಾರ ಹಾಗೂ ಪ್ರಿಯಾಂಕ ವಾಧ್ರ ನಡುವೆ ಆರೋಪ-ಪ್ರತ್ಯಾರೋಗಳ ನಂತರ ಈಗ ಪ್ರಿಯಾಂಕ ವಾಧ್ರ ಉತ್ತರ ಪ್ರದೇಶ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.
ಉತ್ತರ ಪ್ರದೇಶದಲ್ಲಿ ವಲಸಿಗ ಕಾರ್ಮಿಕರಿಗೆ ಸಹಾಯ ಮಾಡುತ್ತಿರುವವರನ್ನು ಸರ್ಕಾರ ಜೈಲಿಗೆ ಕಳಿಸುತ್ತಿದೆ ಎಂದು ಆರೋಪಿಸಿರುವ ಪ್ರಿಯಾಂಕ ವಾಧ್ರ, ಪಕ್ಷದ ಕಾರ್ಯಕರ್ತರಿಗೆ ಹೋರಾಟ ಮುಂದುವರೆಸುವಂತೆ ಕರೆ ನೀಡಿದ್ದಾರೆ.
ಉತ್ತರ ಪ್ರದೇಶದ ಕಾಂಗ್ರೆಸ್ ಮುಖ್ಯಸ್ಥ ಅಜಯ್ ಕುಮಾರ್ ಲಲ್ಲು ಅವರನ್ನು ಎರಡು ಬಾರಿ ಬಂಧಿಸಲಾಗಿತ್ತು, ಕಾಂಗ್ರೆಸ್ ಪಕ್ಷ ವಲಸಿಗ ಕಾರ್ಮಿಕರಿಗಾಗಿ ವ್ಯವಸ್ಥೆ ಮಾಡಲಾಗಿರುವ ಬಸ್ ಗಳನ್ನು ರಾಜ್ಯಕ್ಕೆ ಪ್ರವೇಶಿಸಲು ಅನುಮತಿ ನೀಡುತ್ತಿಲ್ಲ. ಅಜಯ್ ಕುಮಾರ್ ಅವರನ್ನು ಎರಡು ಬಾರಿ ಬಂಧಿಸಲಾಗಿದೆ. ಕೋವಿಡ್-19 ರ ವಿರುದ್ಧ ಯೋಗಿ ಆದಿತ್ಯನಾಥ್ ಸರ್ಕಾರದ ಹೋರಾಟದ ವಿಧಾನವನ್ನು ನೋಡಿದ್ದೀರಾ? ಕಾಂಗ್ರೆಸ್ ಪಕ್ಷ ವಲಸಿಗ ಕಾರ್ಮಿಕರಿಗಾಗಿ ಬಸ್ ವ್ಯವಸ್ಥೆ ಮಾಡಿದರೆ, ಯೋಗಿ ಆದಿತ್ಯನಾಥ್ ಸರ್ಕಾರ ಕಾಂಗ್ರೆಸ್ ಅಧ್ಯಕ್ಷರನ್ನು ಸುಳ್ಳು ಆರೋಪದ ಮೇಲೆ ಜೈಲಿಗೆ ಕಳಿಸುತ್ತಿದೆ ಎಂದು ಪ್ರಿಯಾಂಕ ವಾಧ್ರ ತಮ್ಮ ಸಂದೇಶದಲ್ಲಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


