ಜಮ್ಮು-ಕಾಶ್ಮೀರದ: ಅವಂತಿಪೋರಾದಲ್ಲಿ ಇಬ್ಬರು ಉಗ್ರರನ್ನು ಬಂಧಿಸುವಲ್ಲಿ ಸೇನೆ ಯಶಸ್ವಿ
ಜಮ್ಮು ಮತ್ತು ಕಾಶ್ಮೀರದ ಅವಂತಿಪೋರಾದಲ್ಲಿ ಇಬ್ಬರು ಉಗ್ರರನ್ನು ಬಂಧಿಸುವಲ್ಲಿ ಭಾರತೀಯ ಸೇನಾಪಡೆಗಳು ಶುಕ್ರವಾರ ಯಶಸ್ವಿಯಾಗಿವೆ.

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅವಂತಿಪೋರಾದಲ್ಲಿ ಇಬ್ಬರು ಉಗ್ರರನ್ನು ಬಂಧಿಸುವಲ್ಲಿ ಭಾರತೀಯ ಸೇನಾಪಡೆಗಳು ಶುಕ್ರವಾರ ಯಶಸ್ವಿಯಾಗಿವೆ.
ತ್ರಾಲ್ ನಿವಾಸಿಗಳಾಗಿದ್ದ ಈ ಇಬ್ಬರೂ ಉಗ್ರರು, ಉಗ್ರರ ಸಂಘಟನೆಗಳಿಗೆ ಕೆಲ ಸೂಕ್ಷ್ಮ ಮಾಹಿತಿಗಳನ್ನು ರವಾನಿಸುವುದರ ಜೊತೆ ಜೊತೆಗೆ ಉಗ್ರರಿಗೆ ನೆರವು ನೀಡುತ್ತಿದ್ದರು ಎಂದು ತಿಳಿದುಬಂದಿದೆ.
ಈ ಬಗ್ಗೆ ಖಚಿತ ಮಾಹಿತಿ ತಿಳಿಯುತ್ತಿದ್ದಂತೆಯೇ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಹಾಗೂ ಸೇನಾಪಡೆಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಇಬ್ಬರು ಉಗ್ರರನ್ನು ಬಂಧನಕ್ಕೊಳಪಡಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತರಾಗಿರುವ ಇಬ್ಬರೂ ಉಗ್ರರು ಅನ್ಸರ್ ಗಜ್ವತ್ ಉಲ್ ಹಿಂದ್ ಹಾಗೂ ಹಿಜ್ಬ್ ಉಲ್ ಮುಜಾಹಿದ್ದೀನ್ ಉಗ್ರ ಸಂಘಟನೆಗೆ ಸೇರಿದವರಾಗಿದ್ದಾರೆಂದು ಹೇಳಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


