ಸಂಸದೀಯ ಸಮಿತಿ ಸಭೆ ನಡೆಸಲು ಪ್ರತಿಪಕ್ಷಗಳ ಆಗ್ರಹ: ಸರ್ಕಾರದಿಂದ ನಿರುತ್ಸಾಹ, ತಿರಸ್ಕಾರ ಸಾಧ್ಯತೆ
ಸಂಸದೀಯ ಸಮಿತಿಗಳ ಸಭೆಗಳನ್ನು ವಿಡಿಯೊ ಕಾನ್ಫರೆನ್ಸ್ ಮೂಲಕ ನಡೆಸಬೇಕೆಂಬ ಪ್ರತಿಪಕ್ಷಗಳ ಬೇಡಿಕೆಯನ್ನು ಕೇಂದ್ರ ಸರ್ಕಾರ ತಿರಸ್ಕರಿಸುವ ಸಾಧ್ಯತೆಯಿದೆ. ವಿಡಿಯೊ ಕಾನ್ಫರೆನ್ಸ್ ಮೂಲಕ ನಡೆಸಿದರೆ ರಹಸ್ಯ ಮಾಹಿತಿಗಳ ಗೌಪ್ಯತೆಗೆ ಧಕ್ಕೆಯುಂಟಾಗಬಹುದು, ಮಾಹಿತಿ ಸೋರಿಕೆಯಾಗುವ ಸಾಧ್ಯತೆಯಿದೆ ಎಂಬುದು ಸರ್ಕಾರದ ಅಭಿಪ್ರಾಯವಾಗಿದೆ.

ನವದೆಹಲಿ: ಸಂಸದೀಯ ಸಮಿತಿಗಳ ಸಭೆಗಳನ್ನು ವಿಡಿಯೊ ಕಾನ್ಫರೆನ್ಸ್ ಮೂಲಕ ನಡೆಸಬೇಕೆಂಬ ಪ್ರತಿಪಕ್ಷಗಳ ಬೇಡಿಕೆಯನ್ನು ಕೇಂದ್ರ ಸರ್ಕಾರ ತಿರಸ್ಕರಿಸುವ ಸಾಧ್ಯತೆಯಿದೆ. ವಿಡಿಯೊ ಕಾನ್ಫರೆನ್ಸ್ ಮೂಲಕ ನಡೆಸಿದರೆ ರಹಸ್ಯ ಮಾಹಿತಿಗಳ ಗೌಪ್ಯತೆಗೆ ಧಕ್ಕೆಯುಂಟಾಗಬಹುದು, ಮಾಹಿತಿ ಸೋರಿಕೆಯಾಗುವ ಸಾಧ್ಯತೆಯಿದೆ ಎಂಬುದು ಸರ್ಕಾರದ ಅಭಿಪ್ರಾಯವಾಗಿದೆ.
ಅಸುರಕ್ಷಿತ ಮಾಧ್ಯಮಗಳ ಮೂಲಕ ಸೂಕ್ಷ್ಮ ಮಾಹಿತಿಗಳನ್ನು ಸೋರಿಕೆ ಮಾಡುವುದು ಸರಿಯಲ್ಲ ಎಂದು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಮತ್ತು ರಾಜ್ಯ ಸಭಾ ಅಧ್ಯಕ್ಷ ವೆಂಕಯ್ಯ ನಾಯ್ಡು ಅವರ ಅಭಿಪ್ರಾಯವಾಗಿದೆ. ಸಂಸದೀಯ ವ್ಯವಹಾರಗಳ ವಿಷಯಗಳನ್ನು ಗೌಪ್ಯವಾಗಿ ಕಾಪಾಡಿಕೊಳ್ಳಬೇಕೆಂಬುದು ಸರ್ಕಾರದ ಅಭಿಪ್ರಾಯವಾಗಿದೆ.
ದೇಶದಲ್ಲಿ ವಾಯುಮಾರ್ಗ ಮತ್ತು ರೈಲು ಸಂಚಾರ ಸೇವೆಗಳನ್ನು ಹಂತ ಹಂತವಾಗಿ ಆರಂಭಿಸುತ್ತಿರುವಾಗ ಮತ್ತು ಕೇಂದ್ರ ಸರ್ಕಾರ ಅಂತರಾಜ್ಯ ಸಂಚಾರಕ್ಕೆ ಅನುವು ಮಾಡಿಕೊಡುತ್ತಿರುವ ಸಂದರ್ಭದಲ್ಲಿ ಸಮಿತಿ ಸದಸ್ಯರ ಸಂಚಾರಕ್ಕೆ ಯಾವುದೇ ಅಡಚಣೆಯಿರುವುದಿಲ್ಲ. ಹೀಗಿರುವಾಗ ಸಂಸದೀಯ ಸಮಿತಿ ಸಭೆಯನ್ನು ಜೂನ್ 1ರಿಂದ ಆರಂಭಿಸಬಹುದು.
ಕೊರೋನಾ ವೈರಸ್ ಬಿಕ್ಕಟ್ಟನ್ನು ಸರ್ಕಾರ ಹೇಗೆ ನಿಭಾಯಿಸುತ್ತಿದೆ, ವಲಸೆ ಕಾರ್ಮಿಕರ ಸಮಸ್ಯೆಗೆ ಏನು ಕ್ರಮ ಕೈಗೊಂಡಿದೆ ಎಂದು ಚರ್ಚೆ ನಡೆಸಲು, ಸರ್ಕಾರದ ನಿಖರತೆ ಬಗ್ಗೆ ತಿಳಿದುಕೊಳ್ಳಲು ಸಂಸದೀಯ ಸಮಿತಿ ಸಭೆಗಳನ್ನು ನಡೆಸುವಂತೆ ವಿರೋಧ ಪಕ್ಷಗಳು ಇತ್ತೀಚೆಗೆ ಸರ್ಕಾರವನ್ನು ಒತ್ತಾಯಿಸಿದ್ದವು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


