ಸೋಂಕು ನಿಯಂತ್ರಣ ಮತ್ತು ಮರಣ ಪ್ರಮಾಣ ತಗ್ಗಿಸುವಲ್ಲಿ ಮುಂಚೂಣಿಯಲ್ಲಿ ಬೆಂಗಳೂರು: ಸಿಎಂ ಯಡಿಯೂರಪ್ಪ
ದೇಶದಲ್ಲಿ ಕೊರೊನಾ ಸೋಂಕು ನಿಯಂತ್ರಣ ಹಾಗೂ ಮರಣ ಪ್ರಮಾಣವನ್ನು ತಗ್ಗಿಸುವಲ್ಲಿ ಬೆಂಗಳೂರು ನಗರ ಮುಂಚೂಣಿಯಲ್ಲಿದೆ ಎಂದು ಮುಖ್ಯ ಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಬೆಂಗಳೂರು: ದೇಶದಲ್ಲಿ ಕೊರೊನಾ ಸೋಂಕು ನಿಯಂತ್ರಣ ಹಾಗೂ ಮರಣ ಪ್ರಮಾಣವನ್ನು ತಗ್ಗಿಸುವಲ್ಲಿ ಬೆಂಗಳೂರು ನಗರ ಮುಂಚೂಣಿಯಲ್ಲಿದೆ ಎಂದು ಮುಖ್ಯ ಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಕೋವಿಡ್-19 ಸೋಂಕು ನಿಯಂತ್ರಣ ವಲಯದಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ೪ ಮಾದರಿ ನಗರಗಳನ್ನು ಕೇಂದ್ರ ಗುರುತಿಸಿದ್ದು, ಇದರಲ್ಲಿ ಬೆಂಗಳೂರು ಸಹ ಸೇರಿರುವುದು ಹೆಮ್ಮೆಯ ಸಂಗತಿ ಎಂದಿದ್ದಾರೆ.
ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ ಕೊರೊನಾ ಯೋಧರ ಪರಿಶ್ರಮಕ್ಕೆ ಅನುಮೋದನೆ ದೊರೆತಿದೆ. ಇಡೀ ತಂಡಕ್ಕೆ ಅಭಿನಂದನೆ ಸಲ್ಲಿಸುತ್ತಿದ್ದು, ಉತ್ತಮ ಸೇವೆಯನ್ನು ಮುಂದುವರಿಸೋಣ ಎಂದು ಯಡಿಯೂರಪ್ಪ ಕರೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


