ದೇಶ

ಜಮ್ಮು-ಕಾಶ್ಮೀರ: ಕುಲ್ಗಾಂನಲ್ಲಿ ಎನ್'ಕೌಂಟರ್, 2 ಉಗ್ರರನ್ನು ಹೊಡೆದುರುಳಿಸಿದ ಸೇನಾಪಡೆ

ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂನಲ್ಲಿ ಭಾರತೀಯ ಸೇನಾಪಡೆ ಎನ್'ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹೊಡೆದುರುಳಿಸುವಲ್ಲಿ ಯಶಸ್ವಿಯಾಗಿದ್ದಾರೆಂದು ಸೋಮವಾರ ತಿಳಿದುಬಂದಿದೆ.

ಜಮ್ಮು-ಕಾಶ್ಮೀರ: ಕುಲ್ಗಾಂನಲ್ಲಿ ಎನ್'ಕೌಂಟರ್, 2 ಉಗ್ರರನ್ನು ಹೊಡೆದುರುಳಿಸಿದ ಸೇನಾಪಡೆ
ಸಂಗ್ರಹ ಚಿತ್ರ
Published On :

ಕುಲ್ಗಾಂ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂನಲ್ಲಿ ಭಾರತೀಯ ಸೇನಾಪಡೆ ಎನ್'ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹೊಡೆದುರುಳಿಸುವಲ್ಲಿ ಯಶಸ್ವಿಯಾಗಿದ್ದಾರೆಂದು ಸೋಮವಾರ ತಿಳಿದುಬಂದಿದೆ. 

ಕುಲ್ಗಾಂ ಜಿಲ್ಲೆಯ ಮಂಜ್ಗಾಮ್ ಎಂಬ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಕುರಿತು ಖಚಿತ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಕುಲ್ಗಾಂ ಜಿಲ್ಲೆಯ ಪೊಲೀಸರು, ಸಿಆರ್'ಪಿಎಫ್ ಪಡೆ ಹಾಗೂ 34ನೇ ರಾಷ್ಟ್ರೀಯ ರೈಫಲ್ಸ್ ಪಡೆಗಳು ಜಂಟಿಯಾಗಿ ಕಾರ್ಯಾಚರಣೆ ಆರಂಭಿಸಿದ್ದವು. 

ಕಾರ್ಯಾಚರಣೆ ಆರಂಭವಾಗುತ್ತಿದ್ದಂತೆಯೇ ಉಗ್ರರು ಏಕಾಏಕಿ ಸೇನಾಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದು, ಪರಿಣಾಮ ಭದ್ರತಾ ಪಡೆಗಳು ಕಾರ್ಯಾಚರಣೆಯನ್ನು ಎನ್'ಕೌಂಟರ್ ಆಗಿ ಪರಿವರ್ತಿಸಿ ಇದೀಗ ಇಬ್ಬರು ಉಗ್ರರನ್ನು ಹತ್ಯೆ ಮಾಡಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.