ದೇಶ

ಈದ್ ಉಲ್ ಫಿತರ್: ಮುಸ್ಲಿಂ ಬಾಂಧವರಿಗೆ ರಾಷ್ಟ್ರಪತಿ, ಪ್ರಧಾನಿ, ಉಪರಾಷ್ಟ್ರಪತಿ ಶುಭಾಶಯ

ರಂಜಾನ್ ಹಬ್ಬ ಪ್ರೀತಿ, ಶಾಂತಿ, ಭ್ರಾತೃತ್ವ ಮತ್ತು ಸೌಹಾರ್ದತೆಯ ಸಂಕೇತ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹೇಳಿದ್ದಾರೆ.

ಈದ್ ಉಲ್ ಫಿತರ್: ಮುಸ್ಲಿಂ ಬಾಂಧವರಿಗೆ ರಾಷ್ಟ್ರಪತಿ, ಪ್ರಧಾನಿ, ಉಪರಾಷ್ಟ್ರಪತಿ ಶುಭಾಶಯ
ಸಂಗ್ರಹ ಚಿತ್ರ
Published On :

ನವದೆಹಲಿ: ರಂಜಾನ್ ಹಬ್ಬ ಪ್ರೀತಿ, ಶಾಂತಿ, ಭ್ರಾತೃತ್ವ ಮತ್ತು ಸೌಹಾರ್ದತೆಯ ಸಂಕೇತ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹೇಳಿದ್ದಾರೆ. 

ಈದ್ ಉಲ್ ಫಿತರ್ ಮುನ್ನಾ ದಿನವಾದ ಭಾನುವಾರ ಮುಸಲ್ಮಾನ ಬಾಂಧವರಿಗೆ ಶುಭ ಕೋರಿರುವ ಅವರು, ಈ ಹಬ್ಬದ ಸಂದರ್ಭದಲ್ಲಿ ಸಮಾಜದ ದುರ್ಬಲ ವರ್ಗದ ಜನರಿಗೆ ಜೊತೆಯಾಗಿ ನಿಲ್ಲಬೇಕು ಎಂಬ ನಂಬಿಕೆ ಜನರಲ್ಲಿ ಬಲಗೊಳ್ಳುತ್ತದೆ ಎಂದರು.

ಅನಿರೀಕ್ಷಿತ ಕೋವಿಡ್ – 19 ಬಿಕ್ಕಟ್ಟಿನ ಸವಾಲನ್ನು ಎದುರಿಸಲು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಸೇರಿದಂತೆ ಎಲ್ಲ ಮುನ್ನೆಚ್ಚರಿಕಾ ಕ್ರಮಗಳನ್ನು ಪಾಲಿಸಿ ಸೋಂಕಿನ ವಿರುದ್ಧ ಹೋರಾಟದಲ್ಲಿ ಶೀಘ್ರ ಗೆಲುವು ಕಾಣಬೇಕಿದೆ ಎಂದು ತಿಳಿಸಿದ್ದಾರೆ. 

ಇದರಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರೂ ಕೂಡ ಶುಭಾಶಯಗಳನ್ನು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.