ದೇಶ

ವಿಮಾನದಲ್ಲಿ ಏಕಾಂಗಿಯಾಗಿ ದೆಹಲಿಯಿಂದ ಬೆಂಗಳೂರಿಗೆ ಬಂದಿಳಿದ 5 ವರ್ಷದ ಮಗು! 

ಭಾರತದಲ್ಲಿ ದೇಶಿ ವಿಮಾನ ಪ್ರಯಾಣ ಪ್ರಾರಂಭವಾಗುತ್ತಿದ್ದಂತೆಯೇ ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ವಿಶೇಷ ಘಟನೆಯೊಂದು ವರದಿಯಾಗಿದೆ.

ವಿಮಾನದಲ್ಲಿ ಏಕಾಂಗಿಯಾಗಿ ದೆಹಲಿಯಿಂದ ಬೆಂಗಳೂರಿಗೆ ಬಂದಿಳಿದ 5 ವರ್ಷದ ಮಗು! 
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ
Published On :

ಬೆಂಗಳೂರು: ಭಾರತದಲ್ಲಿ ದೇಶಿ ವಿಮಾನ ಪ್ರಯಾಣ ಪ್ರಾರಂಭವಾಗುತ್ತಿದ್ದಂತೆಯೇ ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ವಿಶೇಷ ಘಟನೆಯೊಂದು ವರದಿಯಾಗಿದೆ.   

ದೆಹಲಿಯಿಂದ ಕೆಐಎಎಲ್ ಗೆ ಬಂದಿಳಿದ ವಿಮಾನದಲ್ಲಿ 5 ವರ್ಷದ ಬಾಲಕ ಏಕಾಂಗಿಯಾಗಿ ಬಂದಿರುವುದನ್ನು ಸ್ಥಳೀಯ ಸುದ್ದಿವಾಹಿನಿ ವರದಿ ಮಾಡಿದೆ. 3 ತಿಂಗಳ ಹಿಂದೆ ಅಜ್ಜ-ಅಜ್ಜಿಯನ್ನು ನೋಡಲು ಬೆಂಗಳೂರಿನಿಂದ ದೆಹಲಿಗೆ ತೆರಳಿದ್ದ ಬಾಲಕ ಲಾಕ್ ಡೌನ್ ಹಿನ್ನೆಲೆಯಲ್ಲಿ ದೆಹಲಿಯಲ್ಲೇ ಇರುವಂತಾಗಿತ್ತು. ಈಗ ವಿಮಾನ ಸೌಲಭ್ಯ ಪುನಾರಂಭಗೊಂಡಿರುವುದರಿಂದ  ಬಾಲಕನ ಪೋಷಕರು ಮಗನನ್ನು ವಾಪಸ್ ಕರೆಸಿಕೊಂಡಿದ್ದಾರೆ. 

5 ವರ್ಷದ ಬಾಲಕನನ್ನು ವಾಪಸ್ ಕರೆಸಿಕೊಳ್ಳಲು ಬೆಂಗಳೂರಿನಲ್ಲಿರುವ ಆತನ ಪೋಷಕರು ಅಧಿಕಾರಿಗಳಿಗೆ ಮನವಿ ಮಾಡಿ ಇದನ್ನು ವಿಶೇಷ ಪ್ರಕರಣವೆಂದು ಪರಿಗಣಿಸಬೇಕೆಂದು ಕೇಳಿದ್ದರು. ಅಧಿಕಾರಿಗಳು ಸ್ಪಂದಿಸಿದ್ದು, ಬಾಲಕನನ್ನು ಏಕಾಂಗಿಯಾಗಿ ವಿಮಾನದಲ್ಲಿ ಕಳಿಸುವುದಕ್ಕೆ ವ್ಯವಸ್ಥೆ ಮಾಡಿದ್ದಾರೆ. 

ದೆಹಲಿಯಲ್ಲಿ ವಿಮಾನ ಬಂದಿಳಿಯುತ್ತಿದ್ದಂತೆಯೇ ಬಾಲಕನನ್ನು ಆತನ ತಾಯಿ ಬಂದು ಕರೆದುಕೊಂಡು ಹೋಗಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.