ಕೋವಿಡ್-19: 10ನೇ ಸ್ಥಾನದಲ್ಲಿ ಭಾರತ, ಮಾನವನ ಮೇಲೆ ಲಸಿಕೆ ಪ್ರಯೋಗಕ್ಕೆ ಇನ್ನೂ 6 ತಿಂಗಳಾಗುತ್ತಾ?
ಭಾರತದಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ 1.4 ಲಕ್ಷ ದಾಟಿದ್ದು ಇರಾನ್ ನ್ನು ಹಿಂದಿಕ್ಕಿ ಭಾರತ ಅತಿ ಹೆಚ್ಚು ಸೋಂಕಿತರಿರುವ ಪ್ರದೇಶಗಳ ಪಕಿ 10 ನೇ ಸ್ಥಾನದಲ್ಲಿದೆ.

ನವದೆಹಲಿ: ಭಾರತದಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ 1.4 ಲಕ್ಷ ದಾಟಿದ್ದು ಇರಾನ್ ನ್ನು ಹಿಂದಿಕ್ಕಿ ಭಾರತ ಅತಿ ಹೆಚ್ಚು ಸೋಂಕಿತರಿರುವ ಪ್ರದೇಶಗಳ ಪಕಿ 10 ನೇ ಸ್ಥಾನದಲ್ಲಿದೆ.
ಕೊರೋನಾ ವೈರಸ್ ಗೆ ಲಸಿಕೆ ಕಂಡುಹಿಡಿಯುವ ಕೆಲಸ ನಿರಂತರವಾಗಿ ನಡೆಯುತ್ತಿದೆಯಾದರೂ ಈವರೆಗೂ ಸ್ಪಷ್ಟ ಫಲಿತಾಂಶ ಯಾರಿಗೂ ಸಿಕ್ಕಿಲ್ಲ. ಈ ನಡುವೆ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಯ ಮುಖ್ಯಸ್ಥ, ಪ್ರಾದೇಶಿಕ ವೈದ್ಯಕೀಯ ಸಂಶೋಧನೆಯ ನಿರ್ದೇಶಕ, ಡಾ.ರಜನಿ ಕಾಂತ್ ಮಾತನಾಡಿದ್ದು, ಕೋವಿಡ್-19 ಲಸಿಕೆಯನ್ನು ಮಾನವರ ಮೇಲೆ ಪ್ರಯೋಗಿಸುವುದು ಕನಿಷ್ಟ 6 ತಿಂಗಳಾಗುತ್ತದೆ ಎಂದು ಹೇಳಿದ್ದಾರೆ.
ಲಸಿಕೆಯನ್ನು ತಯಾರಿಸಲು ವೈರಸ್ ಪ್ರಭೇದಗಳನ್ನು ಪುಣೆಯ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ವೈರಾಲಜಿಗೆ ಕಳಿಸಲಾಗಿದ್ದು ಭಾರತ್ ಬಯೋಟೆಕ್ ಇಂಟರ್ನ್ಯಾಷನಲ್ ಲಿಮಿಟೆಡ್ ಗೆ ಯಶಸ್ವಿಯಾಗಿ ವರ್ಗಾವಣೆ ಮಾಡಲಾಗಿದೆ. ಈ ಪ್ರಯತ್ನಗಳ ಫಲವಾಗಿ ತಯಾರಾಗುವ ಲಸಿಕೆಯನ್ನು ಮನುಷ್ಯರ ಮೇಲೆ ಪ್ರಯೋಗಿಸಲು ಕನಿಷ್ಟ 6 ತಿಂಗಳು ಬೇಕಾಗುತ್ತದೆ ಎಂದು ರಜನಿಕಾಂತ್ ಹೇಳಿದ್ದಾರೆ.
ಕಳೆದ ವಾರದಿಂದ ಹೆಚ್ಚಾಗುತ್ತಿರುವ ಕೊರೋನಾ ಪ್ರಕರಣಗಳನ್ನು ಕಂಡು ಭಯಪಡಬೇಕಿಲ್ಲ. ವೃದ್ಧರು ಹಾಗೂ ಅನಾರೋಗ್ಯ ಪೀಡಿತರ ಬಗ್ಗೆ ಹೆಚ್ಚು ಗಮನ ಹರಿಸಬೇಕಿದ್ದು, ಮರಣ ಪ್ರಮಾಣವನ್ನು ಸಾಧ್ಯವಾದಷ್ಟೂ ಕಡಿಮೆ ಮಾಡುವತ್ತ ಗಮನ ಹರಿಸಬೇಕಿದೆ ಎಂದು ರಜನಿಕಾಂತ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


