ದೇಶ

ಲಾಕ್ ಡೌನ್ ಮುಗಿಯುವವರೆಗೂ ಸೋನಿಯಾ ಮತ್ತು ರಾಹುಲ್ ರನ್ನು ಕ್ವಾರಂಟೈನ್ ನಲ್ಲಿರಿಸಿ

ಲಾಕ್ ಡೌನ್ ವಿಫಲವಾಗಿದೆ ಎಂದು ಹೇಳುವ ಮೂಲಕ ಜನರಲ್ಲಿ ಭೀತಿ ಹುಟ್ಟಿಸುತ್ತಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಅವರನ್ನು ಲಾಕ್‌ಡೌನ್ ಕೊನೆಗೊಳ್ಳುವವರೆಗೂ ಕ್ವಾರಂಟೈನ್ ಮಾಡಬೇಕು ಎಂದು ಪಶ್ಚಿಮ ದೆಹಲಿಯ ಬಿಜೆಪಿ ಸಂಸದ ಪರ್ವೇಶ್ ವರ್ಮಾ ಹೇಳಿದ್ದಾರೆ.

ಲಾಕ್ ಡೌನ್ ಮುಗಿಯುವವರೆಗೂ ಸೋನಿಯಾ ಮತ್ತು ರಾಹುಲ್ ರನ್ನು ಕ್ವಾರಂಟೈನ್ ನಲ್ಲಿರಿಸಿ
ಪರ್ವೇಶ್ ವರ್ಮಾ
Published On :

ನವದೆಹಲಿ: ಲಾಕ್ ಡೌನ್ ವಿಫಲವಾಗಿದೆ ಎಂದು ಹೇಳುವ ಮೂಲಕ ಜನರಲ್ಲಿ ಭೀತಿ ಹುಟ್ಟಿಸುತ್ತಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಅವರನ್ನು ಲಾಕ್‌ಡೌನ್ ಕೊನೆಗೊಳ್ಳುವವರೆಗೂ ಕ್ವಾರಂಟೈನ್ ಮಾಡಬೇಕು ಎಂದು ಪಶ್ಚಿಮ ದೆಹಲಿಯ ಬಿಜೆಪಿ ಸಂಸದ ಪರ್ವೇಶ್ ವರ್ಮಾ ಹೇಳಿದ್ದಾರೆ.

ಈಗಾಗಲೇ ಕೊರೊನಾದಿಂದಾಗಿ ಭೀತಿಗೊಳಗಾಗಿರುವ ಜನರಲ್ಲಿ ಅವರು ಮತ್ತಷ್ಟು ದಿಗಿಲು ಹುಟ್ಟಿಸುತ್ತಿದ್ದಾರೆ. ಇದನ್ನು ತಡೆಯಲು ಗಾಂಧಿ ಕುಟುಂಬದವರನ್ನು ಕ್ವಾರಂಟೈನ್‌ನಲ್ಲಿ ಇಡಬೇಕು ಎಂದು ಅವರು ಹೇಳಿದ್ದಾರೆ.

ಕೊರೊನಾದಿಂದಾಗಿ ಜನರು ಮೊದಲೇ ಭೀತಿಗೊಳಗಾಗಿದ್ದಾರೆ. ಮಾರ್ಚ್‌ 25ರಂದು ದೇಶದಾದ್ಯಂತ ಲಾಕ್‌ಡೌನ್ ಘೋಷಣೆಯಾದಾಗಿನಿಂದಲೂ ಸೋನಿಯಾ ಗಾಂಧಿ, ರಾಹುಲ್  ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಪ್ರತಿಯೊಂದರಲ್ಲೂ ತಪ್ಪುಗಳನ್ನೇ ಹುಡುಕುತ್ತಿದ್ದಾರೆ. ಜನರಲ್ಲಿ ಮತ್ತಷ್ಟು ದಿಗಿಲು ಹುಟ್ಟಿಸುತ್ತಿದ್ದಾರೆ ಎಂದು ವರ್ಮಾ ದೂರಿದ್ದಾರೆ.

ಕಾಂಗ್ರೆಸ್ ಸಹ ಇದಕ್ಕೆ ಕಟುವಾದ ತಿರುಗೇಟು ನೀಡಿದೆ. ವೈಯಕ್ತಿಕ ಟೀಕೆ ಮಾಡುವ ಬದಲು ಯೋಜಿತವಲ್ಲದ ಲಾಕ್‌ಡೌನ್‌ನಿಂದ ವಲಸೆ ಕಾರ್ಮಿಕರಿಗೆ ಆಗಿರುವ ತೊಂದರೆಗಳ ಬಗ್ಗೆ ಬಿಜೆಪಿ ಉತ್ತರಿಸಲಿ ಎಂದು ಕಾಂಗ್ರೆಸ್ ಹೇಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.