ದೇಶ

49 ಸಿಬ್ಬಂದಿಗಳಿಗೆ ಹರಡಿದ ಕೊರೋನಾ ಸೋಂಕು; ತಮಿಳುನಾಡಿನಲ್ಲಿ ನೋಕಿಯಾ ಫೋನ್‌ ತಯಾರಿಕಾ ಘಟಕ ಸ್ಥಗಿತ

ನೆರೆಯ ತಮಿಳುನಾಡಿನಲ್ಲಿ ಕೊರೋನಾ ವೈರಸ್ ಅಟ್ಟಹಾಸ ಮಿತಿ ಮೀರಿದ್ದು, ನೋಕಿಯಾ ಫೋನ್ ತಯಾರಿಕಾ ಘಟಕದ ಬರೊಬ್ಬರಿ 49 ಮಂದಿ ಸಿಬ್ಬಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿರುವುದರಿಂದ ಇಡೀ ಘಟಕವನ್ನು ಸ್ಥಗಿತಗೊಳಿಸಲಾಗಿದೆ.

49 ಸಿಬ್ಬಂದಿಗಳಿಗೆ ಹರಡಿದ ಕೊರೋನಾ ಸೋಂಕು; ತಮಿಳುನಾಡಿನಲ್ಲಿ ನೋಕಿಯಾ ಫೋನ್‌ ತಯಾರಿಕಾ ಘಟಕ ಸ್ಥಗಿತ
ಸಂಗ್ರಹ ಚಿತ್ರ
Published On :

ಚೆನ್ನೈ: ನೆರೆಯ ತಮಿಳುನಾಡಿನಲ್ಲಿ ಕೊರೋನಾ ವೈರಸ್ ಅಟ್ಟಹಾಸ ಮಿತಿ ಮೀರಿದ್ದು, ನೋಕಿಯಾ ಫೋನ್ ತಯಾರಿಕಾ ಘಟಕದ ಬರೊಬ್ಬರಿ 49 ಮಂದಿ ಸಿಬ್ಬಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿರುವುದರಿಂದ ಇಡೀ ಘಟಕವನ್ನು ಸ್ಥಗಿತಗೊಳಿಸಲಾಗಿದೆ.

ತಮಿಳುನಾಡಿನ ಶ್ರೀಪೆರಂಬದೂರಿನಲ್ಲಿರುವ ತಯಾರಿಕಾ ಘಟಕದಲ್ಲಿನ 42 ಸಿಬ್ಬಂದಿಗಳಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಇದೇ ಕಾರಣಕ್ಕೆ ಇಡೀ ಘಟಕವನ್ನು ಸ್ಥಗಿತಗೊಳಿಸಲಾಗಿದೆ ಎಂದು ಹೇಳಲಾಗಿದೆ. ಕಳೆದ ವಾರವಷ್ಟೇ ಶ್ರೀಪೆರಂಬದೂರಿನಲ್ಲಿರುವ ತಯಾರಿಕ ಘಟಕವನ್ನು ಸಿಮೀತ  ಸಿಬ್ಬಂದಿ, ಸಾಮಾಜಿಕ ಅಂತರ ಹಾಗೂ ಅಗತ್ಯ ಸುರಕ್ಷತಾ ಕ್ರಮಗಳೊಂದಿಗೆ ಕಾರ್ಯಾರಂಭ ಮಾಡಲಾಗಿತ್ತು. ಆದರೆ ನೌಕರರಲ್ಲಿ ಮತ್ತೆ ಸೋಂಕು ಪತ್ತೆಯಾಗಿರುವುದರಿಂದ ಮತ್ತೆ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ನೋಕಿಯಾ ಕಂಪನಿ ತಿಳಿಸಿದೆ. 

ಇದೇ ವೇಳೆ ಅಗತ್ಯ ಸುರಕ್ಷತಾ ಕ್ರಮಗಳೊಂದಿಗೆ ಶೀಘ್ರದಲ್ಲೇ ಘಟಕ ಮತ್ತೆ ಕಾರ್ಯಾರಂಭ ಮಾಡಲಿದೆ ಎಂದು ಕಂಪನಿ ತಿಳಿಸಿದೆ. ಪ್ರಸ್ತುತ ಸಂಸ್ಥೆಯಲ್ಲಿ ಎಷ್ಟು ಸಿಬ್ಬಂದಿಗೆ ಸೋಂಕು ವ್ಯಾಪಿಸಿದೆ ಎಂಬುದನ್ನು ಸಂಸ್ಥೆ ತಿಳಿಸಿಲ್ಲ. ಆದರೆ 42 ಸಿಬ್ಬಂದಿಗಳಲ್ಲಿ ಸೋಂಕು ಕಾಣಿಸಿಕೊಂಡಿದೆ ಎಂದು  ಮೂಲಗಳು ತಿಳಿಸಿವೆ.

ಇತ್ತೀಚೆಗಷ್ಟೇ ದೆಹಲಿಯಲ್ಲಿ ಕಾರ್ಯಾರಂಭ ಮಾಡಿದ್ದ ಒಪ್ಪೊ ಮೊಬೈಲ್ ತಯಾರಿಕಾ ಕಂಪನಿಯಲ್ಲಿ ಕೂಡ ಕನಿಷ್ಠ 9 ನೌಕರರಲ್ಲಿ ಕೊರೋನಾ ವೈರಸ್ ಪತ್ತೆಯಾಗಿದ್ದರಿಂದ ಆ ಘಟಕ ತನ್ನ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.