ದೇಶ

ಕೊರೋನಾ ವೈರಸ್: ಭಾರತದಲ್ಲಿ ಹೊಸದಾಗಿ 6387 ಸೋಂಕು ಪ್ರಕರಣ ಪತ್ತೆ, 24 ಗಂಟೆಯಲ್ಲಿ 170 ಮಂದಿ ಸಾವು

ಭಾರತದಲ್ಲಿ ಮಾರಕ ಕೊರೋನಾ ವೈರಸ್ ಆರ್ಭಟ ಮುಂದುವರೆದಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 6387 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿವೆ.

ಕೊರೋನಾ ವೈರಸ್: ಭಾರತದಲ್ಲಿ ಹೊಸದಾಗಿ 6387 ಸೋಂಕು ಪ್ರಕರಣ ಪತ್ತೆ, 24 ಗಂಟೆಯಲ್ಲಿ 170 ಮಂದಿ ಸಾವು
ಸಂಗ್ರಹ ಚಿತ್ರ
Published On :

ನವದೆಹಲಿ: ಭಾರತದಲ್ಲಿ ಮಾರಕ ಕೊರೋನಾ ವೈರಸ್ ಆರ್ಭಟ ಮುಂದುವರೆದಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 6387 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿವೆ.

ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 6387 ಹೊಸ ಕೊರೋನಾ ವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಆ ಮೂಲಕ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 1,51,767ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಸೋಂಕಿನಿಂದಾಗಿ 170 ಜನ ಮೃತಪಟ್ಟಿದ್ದು, ಕೊರೋನಾ ವೈರಸ್  ಸಾವಿನ ಸಂಖ್ಯೆ 4,337ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬುಧವಾರ ಬೆಳಿಗ್ಗೆ ತಿಳಿಸಿದೆ.

ಇನ್ನು ದೇಶಾದ್ಯಂತ ಪ್ರಸ್ತುತ 83,004 ಸಕ್ರಿಯ ಪ್ರಕರಣಗಳಿದ್ದು, 64,425 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. 

ಕೊರೋನಾ ವೈರಸ್ ರಾಜ್ಯಾವಾರು ದತ್ತಾಂಶ ಇಲ್ಲಿದೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.