ಲಾಕ್ ಡೌನ್ ಮುಂದುವರಿಕೆ ಕುರಿತ ವರದಿಗಳು ಕಪೋಲಕಲ್ಪಿತ: ಕೇಂದ್ರ ಗೃಹಸಚಿವಾಲಯ
ಮೇ 31ಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ದೇಶಾದಾದ್ಯಂತ ಜಾರಿಗೊಳಿಸಿದ ಲಾಕ್‌ಡೌನ್ ಐದನೇ ಅವಧಿಗೂ ವಿಸ್ತರಿಸುವುದೆಂಬ ವರದಿಗಳನ್ನು ನಿರಾಕರಿಸಿರುವ ಗೃಹ ವ್ಯವಹಾರಗಳ ಸಚಿವಾಲಯ ಇದು ಸಂಪೂರ್ಣ ಸುಳ್ಳು ಎಂದು ಹೇಳಿದೆ

ನವದೆಹಲಿ: ಮೇ 31ಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ದೇಶಾದಾದ್ಯಂತ ಜಾರಿಗೊಳಿಸಿದ ಲಾಕ್‌ಡೌನ್ ಐದನೇ ಅವಧಿಗೂ ವಿಸ್ತರಿಸುವುದೆಂಬ ವರದಿಗಳನ್ನು ನಿರಾಕರಿಸಿರುವ ಗೃಹ ವ್ಯವಹಾರಗಳ ಸಚಿವಾಲಯ ಇದು ಸಂಪೂರ್ಣ ಸುಳ್ಳು ಎಂದು ಹೇಳಿದೆ.
ಸುದ್ದಿ ವರದಿಗಳನ್ನು ಉಲ್ಲೇಖಿಸಿ ಕೇಂದ್ರ ಗೃಹ ಸಚಿವಾಲಯದ ವಕ್ತಾರರು ತಮ್ಮ ಟ್ವೀಟ್ ಸಂದೇಶದಲ್ಲಿ.’ ಲಾಕ್‍ಡೌನ್ ಕುರಿತ ವರಿಗಳೆಲ್ಲವೂ ಸುಳ್ಳು. ಇವೆಲ್ಲಾ ವರದಿ ಮಾಡುವವರ ಊಹಾಪೋಹಗಳಾಗಿವೆ.’ ಎಂದು ಸಚಿವಾಲಯ ಹೇಳಿದೆ.
ಹಸಿರು ಮತ್ತು ಕಿತ್ತಳೆ ವಲಯಗಳಲ್ಲಿ ಯಾವುದೇ ನಿರ್ಬಂಧಗಳಿರುವುದಿಲ್ಲ ಎಂದು ಸರ್ಕಾರ ಜೂನ್ 1 ರಿಂದ ಘೋಷಿಸಿ ಲಾಕ್‍ಡೌನ್ ಸಡಿಲಿಸಿದೆ ಎಂಬ ಊಹಾಪೋಹದ ನಡುವೆ ಸಚಿವಾಲಯ ಈ ಸ್ಪಷ್ಟನೆ ನೀಡಿದೆ.
ಮುಂದಿನ ಆದೇಶ ಬರುವವರೆಗೂ ಶಾಪಿಂಗ್ ಮಾಲ್‌ಗಳು, ಶಾಲಾ-ಕಾಲೇಜುಗಳು ಸೇರಿದಂತೆ ಶಿಕ್ಷಣ ಸಂಸ್ಥೆಗಳು ಮುಚ್ಚಲ್ಪಟ್ಟಿರುತ್ತವೆ ಎಂದು ಅವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


