ದೇಶ

ತೇಜಸ್ ಯುದ್ಧ ವಿಮಾನಗಳ ಎರಡನೇ ಸ್ಕ್ವಾಡ್ರನ್ ಭಾರತೀಯ ವಾಯುಪಡೆಗೆ ಸೇರ್ಪಡೆ

ಭಾರತೀಯ ವಾಯುಪಡೆಯ ಶಕ್ತಿಯನ್ನು ಮತ್ತಷ್ಟು ಹೆಚ್ಚಿಸಲು ದೇಶಿ ನಿರ್ಮಿತ ತೇಜಸ್ ಎಂಕೆ -1 ಎಫ್‌ಒಸಿ (ಫೈನಲ್ ಆಪರೇಶನ್ಸ್ ಕ್ಲಿಯರೆನ್ಸ್) ಯುದ್ಧ ವಿಮಾನಗಳ ಎರಡನೇ ಸ್ಕ್ವಾಡ್ರನ್ ಬುಧವಾರ ಕೊಯಮತ್ತೂರಿನ ಸುಲೂರ್ ವಾಯುಪಡೆ ನಿಲ್ದಾಣದಲ್ಲಿ ಅಧಿಕೃತವಾಗಿ ಭಾರತೀಯ ವಾಯುಪಡೆಗೆ ಸೇರ್ಪಡೆಯಾಗಿದೆ.

ತೇಜಸ್ ಯುದ್ಧ ವಿಮಾನಗಳ ಎರಡನೇ ಸ್ಕ್ವಾಡ್ರನ್ ಭಾರತೀಯ ವಾಯುಪಡೆಗೆ ಸೇರ್ಪಡೆ
ಸಾಂದರ್ಭಿಕ ಚಿತ್ರ
Published On :

ಕೊಯಮತ್ತೂರು: ಭಾರತೀಯ ವಾಯುಪಡೆಯ ಶಕ್ತಿಯನ್ನು ಮತ್ತಷ್ಟು ಹೆಚ್ಚಿಸಲು ದೇಶಿ ನಿರ್ಮಿತ ತೇಜಸ್ ಎಂಕೆ -1 ಎಫ್‌ಒಸಿ (ಫೈನಲ್ ಆಪರೇಶನ್ಸ್ ಕ್ಲಿಯರೆನ್ಸ್) ಯುದ್ಧ ವಿಮಾನಗಳ ಎರಡನೇ ಸ್ಕ್ವಾಡ್ರನ್ ಬುಧವಾರ ಕೊಯಮತ್ತೂರಿನ ಸುಲೂರ್ ವಾಯುಪಡೆ ನಿಲ್ದಾಣದಲ್ಲಿ ಅಧಿಕೃತವಾಗಿ ಭಾರತೀಯ ವಾಯುಪಡೆಗೆ ಸೇರ್ಪಡೆಯಾಗಿವೆ.

ವಾಯುಪಡೆ ಮುಖ್ಯಸ್ಥ ಆರ್​.ಕೆ.ಎಸ್​ ಭಡೌರಿಯಾ ಅವರು ತೇಜಸ್ ಯುದ್ಧ ವಿಮಾನ ನಂ. 45 ಸ್ಕ್ವಾಡ್ರನ್ (ಫ್ಲೈಯಿಂಗ್ ಬುಲೆಟ್ಸ್) ಅನ್ನು ವಾಯುನೆಲೆಯಲ್ಲಿ ಹಾರಿಸುವ ಮೂಲಕ ವಾಯುಪಡೆಗೆ ಸೇರಿಸಿಕೊಳ್ಳಲಾಯಿತು.

''ಫ್ಲೈಯಿಂಗ್ ಬುಲೆಟ್ಸ್-45' ಎಂಬ ಹೆಸರಿನ ಈ ಲಘು ಯುದ್ಧ ವಿಮಾನ ಬೆಂಗಳೂರಿನ ಎಚ್ಎಎಲ್ ನಲ್ಲಿ ನಿರ್ಮಾಣವಾಗಿದೆ.

ಬಳಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಭಡೌರಿಯಾ ಅವರು, ಭಾರತೀಯ ವಾಯುಪಡೆ ಈಗ ವಿದೇಶಿ ಉತ್ಪನ್ನಗಳಿಗಿಂತ ಸ್ಥಳೀಯ ಉತ್ಪನ್ನಗಳನ್ನು ಅವಲಂಬಿಸಿದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.