ದೇಶ

ಹಿಜ್ಬುಲ್‍ ಮುಜಾಹಿದ್ದೀನ್‍ ನ ಇಬ್ಬರು ಸ್ಥಳೀಯ ಮಟ್ಟದ ಕಾರ್ಯಕರ್ತರ ಬಂಧನ: ಶಸ್ತ್ರಾಸ್ತ್ರ ಮತ್ತು ಮದ್ದುಗುಂಡು ವಶ

ಜಮ್ಮು-ಕಾಶ್ಮೀರದ ಗಡಿ ಜಿಲ್ಲೆಯಾದ ಕುಪ್ವಾರದ ಹಂದ್ವಾರಾದಲ್ಲಿ ಹಿಜ್ಬುಲ್ ಮುಜಾಹಿದ್ದೀನ್(ಎಚ್‌ಎಂ) ಸಂಘಟನೆಯ ಇಬ್ಬರ ಸ್ಥಳೀಯ ಮಟ್ಟದ ಕಾರ್ಯಕರ್ತರನ್ನು(ಒಜಿಡಬ್ಲ್ಯು) ಭದ್ರತಾ ಪಡೆಗಳು ಬಂಧಿಸಿದ್ದು, ಎರಡು ಪಿಸ್ತೂಲ್ ಸೇರಿದಂತೆ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ಭದ್ರತಾ ಪಡೆಗಳು ಬಂಧಿಸಿವೆ.

ಹಿಜ್ಬುಲ್‍ ಮುಜಾಹಿದ್ದೀನ್‍ ನ ಇಬ್ಬರು ಸ್ಥಳೀಯ ಮಟ್ಟದ ಕಾರ್ಯಕರ್ತರ ಬಂಧನ: ಶಸ್ತ್ರಾಸ್ತ್ರ ಮತ್ತು ಮದ್ದುಗುಂಡು ವಶ
ಸಂಗ್ರಹ ಚಿತ್ರ
Published On :

ಶ್ರೀನಗರ: ಜಮ್ಮು-ಕಾಶ್ಮೀರದ ಗಡಿ ಜಿಲ್ಲೆಯಾದ ಕುಪ್ವಾರದ ಹಂದ್ವಾರಾದಲ್ಲಿ ಹಿಜ್ಬುಲ್ ಮುಜಾಹಿದ್ದೀನ್(ಎಚ್‌ಎಂ) ಸಂಘಟನೆಯ ಇಬ್ಬರ ಸ್ಥಳೀಯ ಮಟ್ಟದ ಕಾರ್ಯಕರ್ತರನ್ನು(ಒಜಿಡಬ್ಲ್ಯು) ಭದ್ರತಾ ಪಡೆಗಳು ಬಂಧಿಸಿದ್ದು, ಎರಡು ಪಿಸ್ತೂಲ್ ಸೇರಿದಂತೆ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ಭದ್ರತಾ ಪಡೆಗಳು ಬಂಧಿಸಿವೆ.
 
ನಿರ್ದಿಷ್ಟ ಮಾಹಿತಿಯಂತೆ ಪೊಲೀಸರು, 30 ರಾಷ್ಟ್ರೀಯ ರೈಫಲ್ಸ್(ಆರ್ ಆರ್) ಮತ್ತು ಸಿಆರ್‌ಪಿಎಫ್‌ನ 92 ಬೆಟಾಲಿಯನ್ ಒಳಗೊಂಡ ಜಂಟಿ ತಪಾಸಣಾ ಶಿಬಿರವನ್ನು ಹಂದ್ವಾರದ ಕ್ರಾಲ್‌ಗುಂಡ್‌ನ ಪಂಡಿತ್‌ಪೋರಾದಲ್ಲಿ ಸ್ಥಾಪಿಸಲಾಗಿತ್ತು ಎಂದು ಅಧಿಕೃತ ಮೂಲಗಳು ತಿಳಿಸಿವೆ.

‘ನಾಕಾ ತಪಾಸಣೆ ನೋಡಿದ ಇಬ್ಬರು ಅನುಮಾನಾಸ್ಪದ ವ್ಯಕ್ತಿಗಳು ಸ್ಥಳದಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ ಆದರೆ ಅವರನ್ನು ಭದ್ರತಾ ಪಡೆಗಳು ಬೆನ್ನಟ್ಟಿ ಬಂಧಿಸಿವೆ. ಆರೋಪಿಗಳನ್ನು ಆಸಿಫ್ ಅಹ್ಮದ್ ದರ್ ಮತ್ತು ಮುಜಾಮಿಲ್ ಅಹ್ಮದ್ ಪೀರ್ ಎಂದು ಗುರುತಿಸಲಾಗಿದೆ.

ಬಂಧಿತರಿಂದ ಎರಡು ಪಿಸ್ತೂಲ್‌ಗಳು, ಅನೇಕ ಪಿಸ್ತೂಲ್ ಮ್ಯಾಗಜೀನ್‍ಗಳು ಮತ್ತು 20 ಪಿಸ್ತೂಲ್ ಗುಂಡುಗಳ ಸುತ್ತುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಪ್ರಕರಣವನ್ನು ದಾಖಲಿಸಲಾಗಿದೆ. ಉಗ್ರರ ಸಹವರ್ತಿಗಳನ್ನು ಗುರುತಿಸಲು ತನಿಖೆ ಆರಂಭಿಸಲಾಗಿದೆ" ಎಂದು ಅವರು ಹೇಳಿದ್ದಾರೆ.
 
ಬಂಧಿತ ಇಬ್ಬರು ಸ್ಥಳೀಯ ಮಟ್ಟದ ಕಾರ್ಯಕರ್ತರು 2018 ರಿಂದ ಸಕ್ರಿಯವಾಗಿದ್ದು, ಇವರೆಲ್ಲ ಎಚ್‌ಎಂ ಉಗ್ರರಿಗಾಗಿ ಕೆಲಸ ಮಾಡಿದ್ದಾರೆ. ಉಗ್ರರಿಗೆ ಹಣಕಾಸು ಮತ್ತು ಇತರ ವಸ್ತುಗಳ ಸರಬರಾಜು ಸಹಾಯ ಮಾಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.