ದೇಶ

ಸ್ಮಾರ್ಟ್'ಫೋನ್ ಖರೀದಿಸಲು ಒಲ್ಲೆ ಎಂದ ಪತಿ: ಆತ್ಮಹತ್ಯೆಗೆ ಶರಣಾದ ಪತ್ನಿ!

ಸ್ಮಾರ್ಟ್'ಫೋನ್ ಖರೀದಿಸಲು ಪತಿ ನಿರಾಕರಿಸಿದ ಹಿನ್ನೆಲೆಯಲ್ಲಿ ನೊಂದ ಪತ್ನಿಯೊಬ್ಬಳು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯ ಮೈದಾನ್ ಗರ್ಹಿ ಪ್ರದೇಶದಲ್ಲಿ ನಡೆದಿದೆ.

ಸ್ಮಾರ್ಟ್'ಫೋನ್ ಖರೀದಿಸಲು ಒಲ್ಲೆ ಎಂದ ಪತಿ: ಆತ್ಮಹತ್ಯೆಗೆ ಶರಣಾದ ಪತ್ನಿ!
ಸಂಗ್ರಹ ಚಿತ್ರ
Published On :

ನವದೆಹಲಿ: ಸ್ಮಾರ್ಟ್'ಫೋನ್ ಖರೀದಿಸಲು ಪತಿ ನಿರಾಕರಿಸಿದ ಹಿನ್ನೆಲೆಯಲ್ಲಿ ನೊಂದ ಪತ್ನಿಯೊಬ್ಬಳು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯ ಮೈದಾನ್ ಗರ್ಹಿ ಪ್ರದೇಶದಲ್ಲಿ ನಡೆದಿದೆ. 

ಜ್ಯೋತಿ (29) ಆತ್ಮಹತ್ಯೆಗೆ ಶರಣಾದ ಮಹಿಳೆಯಾಗಿದ್ದಾರೆ. ಮೇ.27 ರಂದು ಮಹಿಳೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆಂದು ತಿಳಿದುಬಂದಿದೆ. 

ಮಕ್ಕಳಿಗೆ ಶಾಲೆಯಲ್ಲಿ ಆನ್'ಲೈನ್ ತರಗತಿ ಪ್ರಾರಂಭಿಸಿರುವ ಹಿನ್ನೆಲೆಯಲ್ಲಿ ಮಹಿಳೆ ತನ್ನ ಪತಿಗೆ ಸ್ಮಾರ್ಟ್ ಫೋನ್ ಖರೀದಿಸುವಂತೆ ತಿಳಿಸಿದ್ದಾಳೆ. ಈ ವೇಳೆ ಪತಿ ಲಾಕ್'ಡೌನ್ ಅಂತ್ಯಗೊಂಡ ಬಳಿಕ ಖರೀದಿ ಮಾಡುವುದಾಗಿ ತಿಳಿಸಿದ್ದಾನೆ. ಈ ವಿಚಾರ ಸಂಬಂಧ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ. ಬಳಿಕ ಮಹಿಳೆ ಬೆಂಕಿ ಹಚ್ಚಿಕೊಂಡಿದ್ದಾಳೆ. 

ಬಳಿಕ ಮಹಿಳೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಮಹಿಳೆಯ ದೇಹ ಶೇ.90ರಷ್ಟು ಸುಟ್ಟುಹೋಗಿದ್ದ ಪರಿಣಾಮ ಬದುಕುಳಿಯಲು ಸಾಧ್ಯವಾಗಿಲ್ಲ. ದಂಪತಿಗಳಿಬ್ಬರು 7 ವರ್ಷಗಳ ಹಿಂದೆ ವಿವಾಹವಾಗಿದ್ದು, ಇಬ್ಬರಿಗೂ ಇಬ್ಬರು ಮಕ್ಕಳಿದ್ದಾರೆಂದು ಮಹಿಳೆಯ ಪತಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.