ಉತ್ತರ ಪ್ರದೇಶ: ಕ್ವಾರಂಟೈನ್ ಕೇಂದ್ರದಿಂದ ಪರಾರಿಯಾಗಿದ್ದ ವಲಸೆ ಕಾರ್ಮಿಕ ಆತ್ಮಹತ್ಯೆಗೆ ಶರಣು!
ಕ್ವಾರಂಟೈನ್ ಕೇಂದ್ರದಿಂದ ಪರಾರಿಯಾಗಿದ್ದ ವಲಸೆ ಕಾರ್ಮಿಕನೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಲಖನೌ: ಕ್ವಾರಂಟೈನ್ ಕೇಂದ್ರದಿಂದ ಪರಾರಿಯಾಗಿದ್ದ ವಲಸೆ ಕಾರ್ಮಿಕನೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ಉತ್ತರ ಪ್ರದೇಶದ ಬಾಂದಾ ಜಿಲ್ಲೆಯ ಜೌಹಾರ್ ಪುರ ಗ್ರಾಮದ ನಿವಾಸಿ 35 ವರ್ಷದ ವಲಸೆ ಕಾರ್ಮಿಕ ಜಗದೀಶ್ ಪ್ರಸಾದ್ ಎಂಬ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮೃತ ಜಗದೀಶ್ ಪ್ರಸಾದ್ ಕಳೆದ ಆರು ತಿಂಗಳ ಹಿಂದೆ ಕೆಲಸ ಅರಸಿ ಸೂರತ್ ಗೆ ತೆರಳಿದ್ದ. ಕಳೆದ ಮೇ 20ರಂದು ಗ್ರಾಮಕ್ಕೆ ವಾಪಸ್ ಆಗಿದ್ದ, ಈ ವೇಳೆ ಗ್ರಾಮದಲ್ಲೇ ಆತನನ್ನು ಕ್ವಾರಂಟೈನ್ ಮಾಡಲಾಗಿತ್ತು.
ಬಳಿಕ ಆತ ಕ್ವಾರಂಟೈನ್ ಕೇಂದ್ರ ಪರಾರಿಯಾಗಿ, ತನ್ನ ಮಾವನಮನೆಗೆ ಬಂದಿದ್ದ. ಆದರೆ ಮಾರನೆ ದಿನವೇ ಅಂದರೆ ಗುರುವಾರ ನೇಣು ಬಿಗಿದುಕೊಂಡು ಆತ ಆತ್ಮಹತ್ಯೆಗೆ ಶರಣಾಗಿದ್ದಾನೆ. ತಿಂಡ್ವಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಈ ಬಗ್ಗೆ ಮಾಹಿತಿ ನೀಡಿರುವ ಎಸ್ ಎಚ್ ಒ ನೀರಜ್ ಕುಮಾರ್ ಅವರು, ಪ್ರಾಥಮಿಕ ತನಿಖೆಯಲ್ಲಿ ಮೃತ ಜಗದೀಶ್ ಮತ್ತು ಆತನ ಪತ್ನಿಯೊಂದಿಗೆ ಕಲಹದಿಂದಾಗಿ ಆತ ಆತ್ಮಹತ್ಯೆಗೆ ಶರಣಾಗಿರುವ ಕುರಿತು ಶಂಕೆ ವ್ಯಕ್ತವಾಗಿದೆ. ರೇಷನ್ ತರುವ ವಿಚಾರದಲ್ಲಿ ಪತ್ನಿಯೊಂದಿಗೆ ಆತ ಜಗಳ ಮಾಡಿಕೊಂಡಿದ್ದ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ವಿಶೇಷ ಸೂಚನೆ
ಆತ್ಮಹತ್ಯೆಯಂತಹ ನಿರ್ಧಾರಗಳು ತಪ್ಪು. ನೀವು ವೈಯುಕ್ತಿಕ ಸಮಸ್ಯೆಗಳಿಂದಾಗಿ ಆತ್ಮಹತ್ಯೆಯಂತಹ ಯೋಚನೆ ಮಾಡುತ್ತಿದ್ದರೆ ಅಥವಾ ನಿಮಗೆ ಭಾವನಾತ್ಮಕ ನೆರವಿನ ಅಗತ್ಯತೆ ಇದ್ದರೆ ತಜ್ಞರ ಸಲಹೆ ಪಡೆಯಿರಿ. AASRA's 24x7 Helpline: +91-9820466726
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


