ಜಮ್ಮು-ಕಾಶ್ಮೀರ: 3 ಎಲ್ಇಟಿ ಉಗ್ರರನ್ನು ಬಂಧಿಸಿದ ಪೊಲೀಸರು
ಜಮ್ಮು ಮತ್ತು ಕಾಶ್ಮೀರದ ಕುಪ್ವಾರದಲ್ಲಿ ಮೂವರು ಲಷ್ಕರ್-ಇ-ತೊಯ್ಬಾ ಉಗ್ರರನ್ನು ಬಂಧನಕ್ಕೊಳಪಡಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಬಾರಾಮುಲ್ಲಾ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರದಲ್ಲಿ ಮೂವರು ಲಷ್ಕರ್-ಇ-ತೊಯ್ಬಾ ಉಗ್ರರನ್ನು ಬಂಧನಕ್ಕೊಳಪಡಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಉಗ್ರರು ಅಡಗಿ ಕುಳಿತಿರುವ ಮಾಹಿತಿ ತಿಳಿಯುತ್ತಿದ್ದಂತೆಯೇ ಪೊಲೀಸ್ ಪೊಲೀಸರು ಜಂಟಿ ಕಾರ್ಯಾಚರಣೆ ಆರಂಭಿಸಿದ್ದರು. ಇದರಂತೆ ಮೂವರು ಉಗ್ರರನ್ನು ಬಂಧಿಸಿದ್ದಾರೆಂದು ತಿಳಿದುಬಂದಿದೆ.
ಸೊಪೋನಾ ಕುಪ್ವಾರ ರಸ್ತೆಯ ಶಾನ್ಗೇರ್ಗುಂದ್ ಎಂಬ ಪ್ರದೇಶದಲ್ಲಿ ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದರು. ಈ ವೇಳೆ ಎಲ್ಇಟಿ ಉಗ್ರ ಸಂಘಟನೆಗೆ ಸೇರಿದ ಮುಶ್ತಾಕ್ ಅಹ್ಮದ್ ಮಿರ್, ಮುದಾಸಿರ್ ಅಹ್ಮದ್ ಮಿರ್ ಹಾಗೂ ಅಥರ್ ಶಾಮಾಸ್ ಮಿಸ್ ಎಂಬ ಮೂವರು ಉಗ್ರರನ್ನು ಬಂಧಿಸಿ, ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


