ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನ ಜಗಿದು ಉಗಿಯುವುದು ನಿಷೇಧ; ಆರೋಗ್ಯ ಇಲಾಖೆ ಆದೇಶ
ಕೊರೋನಾ ಸೋಂಕು ಹರಡುವುದನ್ನು ತಡೆಯುವ ಉದ್ದೇಶದಿಂದ ಸಾರ್ವಜನಿಕ ಸ್ಥಳಗಳಲ್ಲಿ ಜಗಿಯುವ ತಂಬಾಕು ಉತ್ಪನ್ನಗಳು ಹಾಗೂ ಪಾನ್ ಮಸಾಲ ಉತ್ಪನ್ನಗಳ ಸೇವನೆ ಮತ್ತು ಉಗುಳುವುದನ್ನು ನಿಷೇಧಿಸಿ ರಾಜ್ಯ ಆರೋಗ್ಯ ಇಲಾಖೆ ಶುಕ್ರವಾರ ಆದೇಶ ಹೊರಡಿಸಿದೆ.

ಬೆಂಗಳೂರು: ಕೊರೋನಾ ಸೋಂಕು ಹರಡುವುದನ್ನು ತಡೆಯುವ ಉದ್ದೇಶದಿಂದ ಸಾರ್ವಜನಿಕ ಸ್ಥಳಗಳಲ್ಲಿ ಜಗಿಯುವ ತಂಬಾಕು ಉತ್ಪನ್ನಗಳು ಹಾಗೂ ಪಾನ್ ಮಸಾಲ ಉತ್ಪನ್ನಗಳ ಸೇವನೆ ಮತ್ತು ಉಗುಳುವುದನ್ನು ನಿಷೇಧಿಸಿ ರಾಜ್ಯ ಆರೋಗ್ಯ ಇಲಾಖೆ ಶುಕ್ರವಾರ ಆದೇಶ ಹೊರಡಿಸಿದೆ.
ಈಗಾಗಲೇ ವಿಶ್ವ ಆರೋಗ್ಯ ಸಂಸ್ಥೆ ಮತ್ತು ಐಸಿಎಂಆರ್ ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದರಿಂದ ಕೋವಿಡ್ -19 ಹೆಚ್ಚುತ್ತಿದೆ ಎಂಬ ಕುರಿತು ಆತಂಕ ವ್ಯಕ್ತಪಡಿಸಿದೆ. ಈ ಹಿನ್ನೆಲೆಯಲ್ಲಿ ತಂಬಾಕು ಜಗಿದು ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದನ್ನು ನಿಷೇಧಿಸಲಾಗಿದೆ ಎಂದು ಇಲಾಖೆ ಆದೇಶದಲ್ಲಿ ತಿಳಿಸಿದೆ.
ನಿಯಮ ಉಲ್ಲಂಘಿಸಿದಲ್ಲಿ, ಐಪಿಸಿ ಸೆಕ್ಷನ್ 188 (ಸಾರ್ವಜನಿಕ ಅಧಿಕಾರಿಯ ಆದೇಶ ಉಲ್ಲಂಘನೆ), 268, 269, 279 (ಜೀವಕ್ಕೆ ಅಪಾಯಕಾರಿಯಾದ ರೋಗವನ್ನು ನಿರ್ಲಕ್ಷ್ಯದಿಂದ ಹರಡುವುದು) ಅಡಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಆದೇಶ ಎಚ್ಚರಿಕೆ ನೀಡಿದೆ. ಈ ಹಿಂದೆ ಎಲ್ಲ ರಾಜ್ಯಗಳಿಗೆ ಪತ್ರ ಬರೆದಿದ್ದ ಕೇಂದ್ರ ಸರ್ಕಾರ, ಸಾರ್ವಜನಿಕ ಸ್ಥಳಗಳಲ್ಲಿ ಜಗಿಯುವ ತಂಬಾಕು ಉತ್ಪನ್ನಗಳ ಸೇವನೆ ಮತ್ತು ಉಗಿಯುವುದನ್ನು ನಿಷೇಧಿಸಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚಿಸಿತ್ತು. ಈಗಾಗಲೇ ಬಿಹಾರ, ಜಾರ್ಖಂಡ್ ರಾಜ್ಯಗಳಲ್ಲಿ ಎಲ್ಲ ರೀತಿಯ ಜಗಿಯುವ ತಂಬಾಕು, ಪಾನ್ ಮಸಾಲ ಉತ್ಪನ್ನಗಳನ್ನು ನಿಷೇಧಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


