ದೇಶ

ಕೋವಿಡ್-19: ದೇಶದಲ್ಲಿ 24 ಗಂಟೆಗಳಲ್ಲಿ 46,964 ಕೇಸ್ ಪತ್ತೆ, 81.84 ಲಕ್ಷಕ್ಕೇರಿದ ಸೋಂಕಿತರ ಸಂಖ್ಯೆ

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 46,964 ಕೇಸ್ ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 81,84,083ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಭಾನುವಾರ ಮಾಹಿತಿ ನೀಡಿದೆ.

ಕೋವಿಡ್-19: ದೇಶದಲ್ಲಿ 24 ಗಂಟೆಗಳಲ್ಲಿ 46,964 ಕೇಸ್ ಪತ್ತೆ, 81.84 ಲಕ್ಷಕ್ಕೇರಿದ ಸೋಂಕಿತರ ಸಂಖ್ಯೆ
ಸಂಗ್ರಹ ಚಿತ್ರ
Published On :

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 46,964 ಕೇಸ್ ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 81,84,083ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಭಾನುವಾರ ಮಾಹಿತಿ ನೀಡಿದೆ.

ಇನ್ನು ನಿನ್ನೆ ಒಂದೇ 470 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 1,22,111ಕ್ಕೆ ತಲುಪಿದೆ ಎಂದು ಸಚಿವಾಲಯ ಮಾಹಿತಿ ನೀಡಿದೆ. 

81,84,083 ಮಂದಿ ಸೋಂಕಿತರ ಪೈಕಿ 74,91,513 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಗುಣಮುಖರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಸತುತ ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 5,70,458ಕ್ಕೆ ಇಳಿಕೆಯಾಗಿದೆ. 

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 10,91,239 ಸ್ಯಾಂಪಲ್ಸ್ ಗಳನ್ನು ಪರೀಕ್ಷೆ ನಡೆಸಲಾಗಿದ್ದು, ಇದರೊಂದಿಗೆ ದೇಶದಲ್ಲಿ ಈ ವರೆಗೂ 10,98,87,303 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ (ಐಸಿಎಂಆರ್) ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.