ರಾಜ್ಯಸಭೆಯಲ್ಲಿ 100 ಸ್ಥಾನಗಳ ಗಡಿ ದಾಟಿದ ಎನ್ ಡಿಎ: ಕಡಿಮೆ ಸ್ಥಾನಕ್ಕೆ ಕುಸಿದ ಕಾಂಗ್ರೆಸ್
ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಸೇರಿದಂತೆ 9 ಬಿಜೆಪಿ ಅಭ್ಯರ್ಥಿಗಳು ಅವಿರೋಧವಾಗಿ ಸೋಮವಾರ ಮೇಲ್ಮನೆಗೆ ಆಯ್ಕೆಯಾಗುವುದರೊಂದಿಗೆ ಆಡಳಿತಾರೂಢ ಎನ್ ಡಿಎ ಮೈತ್ರಿಕೂಟ ರಾಜ್ಯಸಭೆಯಲ್ಲಿ 100 ಸ್ಥಾನಗಳ ಗಡಿ ದಾಟಿದ್ದು, ತನ್ನ ಸ್ಥಾನವನ್ನು ಮತ್ತಷ್ಟು ಭದ್ರಪಡಿಸಿಕೊಂಡಿದೆ.

ನವದೆಹಲಿ: ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಸೇರಿದಂತೆ 9 ಬಿಜೆಪಿ ಅಭ್ಯರ್ಥಿಗಳು ಅವಿರೋಧವಾಗಿ ಸೋಮವಾರ ಮೇಲ್ಮನೆಗೆ ಆಯ್ಕೆಯಾಗುವುದರೊಂದಿಗೆ ಆಡಳಿತಾರೂಢ ಎನ್ ಡಿಎ ಮೈತ್ರಿಕೂಟ ರಾಜ್ಯಸಭೆಯಲ್ಲಿ 100 ಸ್ಥಾನಗಳ ಗಡಿ ದಾಟಿದ್ದು, ತನ್ನ ಸ್ಥಾನವನ್ನು ಮತ್ತಷ್ಟು ಭದ್ರಪಡಿಸಿಕೊಂಡಿದೆ.
ಮತ್ತೊಂದೆಡೆ 242 ಸದಸ್ಯ ಬಲದ ಮೇಲ್ಮನೆಯಲ್ಲಿ ಅನೇಕ ವರ್ಷಗಳಿಂದಲೂ ಪ್ರಾಬಲ್ಯ ಹೊಂದಿದ್ದ ಕಾಂಗ್ರೆಸ್, ಎರಡು ಸ್ಥಾನಗಳನ್ನು ಕಳೆದುಕೊಳ್ಳುವ ಮೂಲಕ ಕೇವಲ 38 ಸ್ಥಾನಗಳನ್ನು ಹೊಂದುವಂತಾಗಿದೆ.
11 ರಾಜ್ಯಸಭಾ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕೇಂದ್ರ ನಗರಾಭಿವೃದ್ಧಿ ಸಚಿವ ಪುರಿ ಸೇರಿದಂತೆ 9 ಬಿಜೆಪಿಯ ಅಭ್ಯರ್ಥಿಗಳು ಗೆಲುವು ಸಾಧಿಸುವ ಮೂಲಕ ಪಕ್ಷ 92 ಸದಸ್ಯರನ್ನು ಹೊಂದಿದಂತಾಗಿದೆ. ಮೂವರು ಅಭ್ಯರ್ಥಿಗಳು ಮರು ಆಯ್ಕೆಯಾಗಿದ್ದು, ಅದರ ಲಾಭವೂ ದೊರೆತಿದೆ. ಎನ್ ಡಿಎ ಅಂಗಪಕ್ಷ ಜೆಡಿಯು ಐದು ಸ್ಥಾನಗಳನ್ನು ಪಡೆದುಕೊಂಡಿದೆ.
ಎನ್ ಡಿಎ ಸಂಖ್ಯಾಬಲ ಇದೀಗ 104ಕ್ಕೆ ಏರಿಕೆಯಾಗಿದ್ದು, ನಾಲ್ವರು ನಾಮನಿರ್ದೇಶಿತ ಸದಸ್ಯರ ಬೆಂಬಲವನ್ನು ಕೂಡಾ ಪಡೆಯಬಹುದಾಗಿದೆ.242 ಸದಸ್ಯ ಬಲದ ರಾಜ್ಯಸಭೆಯಲ್ಲಿ ಬಹುಮತಕ್ಕೆ 121 ಸ್ಥಾನಗಳ ಅಗತ್ಯವಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


