ದೇಶ

ಮಥುರಾ: ಈದ್ಗಾ ಮೈದಾನದಲ್ಲಿ  ಹನುಮಾನ್ ಚಾಲೀಸಾ ಪಠಿಸಿದ ನಾಲ್ವರ ಬಂಧನ

ಮಥುರಾದ ದೇವಾಲಯವೊಂದರಲ್ಲಿ ಮುಸ್ಲಿಮರು ನಮಾಜ್ ಮಾಡಿದ ಬೆನ್ನಲ್ಲೇ, ಈದ್ಗಾ ಮೈದಾನದಲ್ಲಿ ಹನುಮಾನ್ ಚಾಲೀಸಾ ಪಠಿಸಿದ ನಾಲ್ವರು ಯುವಕರನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಈ ಪೈಕಿ ಒಬ್ಬ ಬಿಜೆಪಿಯ ಯುವ ಘಟಕದ ಸ್ಥಳೀಯ ಮುಖಂಡನಾಗಿರುವುದಾಗಿ ಹೇಳಿಕೊಂಡಿದ್ದಾನೆ.

ಮಥುರಾ: ಈದ್ಗಾ ಮೈದಾನದಲ್ಲಿ  ಹನುಮಾನ್ ಚಾಲೀಸಾ ಪಠಿಸಿದ ನಾಲ್ವರ ಬಂಧನ
ಸಾಂದರ್ಭಿಕ ಚಿತ್ರ
Published On :

ಮಥುರಾ: ಮಥುರಾದ ದೇವಾಲಯವೊಂದರಲ್ಲಿ ಮುಸ್ಲಿಮರು ನಮಾಜ್ ಮಾಡಿದ ಬೆನ್ನಲ್ಲೇ, ಈದ್ಗಾ ಮೈದಾನದಲ್ಲಿ ಹನುಮಾನ್ ಚಾಲೀಸಾ ಪಠಿಸಿದ ನಾಲ್ವರು ಯುವಕರನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಈ ಪೈಕಿ ಒಬ್ಬ ಬಿಜೆಪಿಯ ಯುವ ಘಟಕದ ಸ್ಥಳೀಯ ಮುಖಂಡನಾಗಿರುವುದಾಗಿ ಹೇಳಿಕೊಂಡಿದ್ದಾನೆ.

18ರಿಂದ 25 ವರ್ಷದೊಳಗಿನ ಯುವಕರು ಗೋವರ್ಧನ್-ಬರ್ಸಾನ್ ರಸ್ತೆಯಲ್ಲಿರುವ ಈದ್ಗಾ ಮೈದಾನಕ್ಕೆ ತೆರಳಿ ಹಿಂದೂ ಪ್ರಾರ್ಥನೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಹನುಮಾನ್ ಚಾಲೀಸಾ ಪಠಿಸಿದ ನಾಲ್ವರು ಯುವಕರನ್ನು ಶಾಂತಿಗೆ ಭಂಗ ತಂದ ಹಿನ್ನೆಲೆಯಲ್ಲಿ ಬಂಧಿಸಲಾಗಿದ್ದು, ಐಪಿಸಿ ಸೆಕ್ಷನ್ 151ರ ಅಡಿಯಲ್ಲಿ ಎಫ್ ಐಆರ್ ದಾಖಲಿಸಲಾಗಿದೆ. 

ಸೌರಬ್ ನಂಬಾರ್ದಾರ್, ರಾಘವ್ ಮಿತ್ತಲ್, ರೌಕಿ ಮತ್ತು ಖನ್ನಾ ಅವರನ್ನು ಗೋವರ್ಧನ್ ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್ ರಾಹುಲ್ ಯಾದವ್ ಅವರ ಮುಂದೆ ವಿಚಾರಣೆಗೆ ಹಾಜರುಪಡಿಸಲಾಗಿದ್ದು, ತಲಾ 2 ಲಕ್ಷ ಶ್ಯೂರಿಟಿ ಮೇರೆಗೆ ಅವರನ್ನು ಬಿಡುಗಡೆ ಮಾಡಲು ನ್ಯಾಯಾಧೀಶರು ಆದೇಶಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.