ಬಿಹಾರ ವಿಧಾನಸಭಾ ಚುನಾವಣೆ: ಎರಡನೇ ಹಂತದಲ್ಲಿ ಶೇ. 53.51 ರಷ್ಟು ಮತದಾನ
ಬಿಹಾರ ವಿಧಾನಸಭೆಯ 94 ಕ್ಷೇತ್ರಗಳಿಗೆ ಮಂಗಳವಾರ ನಡೆದ ಎರಡನೇ ಹಂತದ ಚುನಾವಣೆಯಲ್ಲಿ ಒಟ್ಟಾರೇಯಾಗಿ ಶೇ. 53. 51 ರಷ್ಟು ಮತದಾನವಾಗಿದೆ.

ಪಾಟ್ನಾ: ಬಿಹಾರ ವಿಧಾನಸಭೆಯ 94 ಕ್ಷೇತ್ರಗಳಿಗೆ ಮಂಗಳವಾರ ನಡೆದ ಎರಡನೇ ಹಂತದ ಚುನಾವಣೆಯಲ್ಲಿ ಒಟ್ಟಾರೇಯಾಗಿ ಶೇ. 53. 51 ರಷ್ಟು ಮತದಾನವಾಗಿದೆ. ಮುಂದಿನ ಹಂತಗಳಲ್ಲಿ ನಡೆಯುವ ಚುನಾವಣೆಯಲ್ಲಿ ಅಂಕಿ ಅಂಶಗಳು ಹೆಚ್ಚಾಗುವ ಸಾಧ್ಯತೆಯಿರುವುದಾಗಿ ಚುನಾವಣಾ ಆಯೋಗ ತಿಳಿಸಿದೆ.
ಮಂಗಳವಾರ ಸಂಜೆ 5 ಗಂಟೆಯವರೆಗೂ ಶೇ 53. 79 ರಷ್ಟು ಮತದಾನವಾಗಿದೆ. 2015ರ ವಿಧಾನಸಭಾ ಚುನಾವಣೆಯಲ್ಲಿ ಈ ಕ್ಷೇತ್ರಗಳಲ್ಲಿ ಶೇ.55.35 ರಷ್ಟು ಮತದಾನವಾಗಿತ್ತು ಎಂದು ಆಯೋಗ ಹೇಳಿದೆ.
94 ವಿಧಾನಸಭಾ ಕ್ಷೇತ್ರಗಳಿಗೆ ಎರಡನೇ ಹಂತದಲ್ಲಿ ಚುನಾವಣೆ ನಡೆದಿದ್ದು, ಆರ್ ಜೆಡಿ ಮುಖಂಡ ತೇಜಸ್ವಿ ಯಾದವ್ ಸೇರಿದಂತೆ 1450 ಇತರ ಅಭ್ಯರ್ಥಿಗಳ ರಾಜಕೀಯ ಭವಿಷ್ಯ ಮತಪೆಟ್ಟಿಗೆಯಲ್ಲಿ ಭದ್ರವಾಗಿದೆ.
ಬೆಳಗ್ಗೆ 7 ಗಂಟೆಗೆ ಆರಂಭವಾದ ಮತದಾನ ಸಂಜೆ ಆರು ಗಂಟೆಯವರೆಗೂ ಮುಂದುವರೆಯಿತು. ಕೊನೆಯ ವೇಳೆಯಲ್ಲಿ ಕೋವಿಡ್-19 ಸೋಂಕಿತರು ಮತದಾನ ಮಾಡಲು ಅವಕಾಶ ಮಾಡಿಕೊಡಲಾಯಿತು. ಆದಾಗ್ಯೂ. ನಕ್ಸಲ್ ಭಾದಿತ ಪ್ರದೇಶಗಳಲ್ಲಿ ಮತದಾನ ಪ್ರಕ್ರಿಯೆ ಬಹಳ ಬೇಗನೆ ಮುಕ್ತಾಯವಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


