ಮುಂದಿನ ವರ್ಷ ಜನವರಿ 31ಕ್ಕೆ ಕೇಂದ್ರೀಯ ಶಿಕ್ಷಕರ ಅರ್ಹತಾ ಪರೀಕ್ಷೆ- ಕೇಂದ್ರ ಶಿಕ್ಷಣ ಸಚಿವರು
ಕೋವಿಡ್-19 ಸಾಂಕ್ರಾಮಿಕ ಕಾಯಿಲೆ ಕಾರಣದಿಂದ ಮುಂದೂಡಲ್ಪಟ್ಟಿರುವ ಕೇಂದ್ರೀಯ ಶಿಕ್ಷಕರ ಅರ್ಹತಾ ಪರೀಕ್ಷೆ ಮುಂದಿನ ವರ್ಷ ಜನವರಿ 31ರಂದು ನಡೆಯಲಿದೆ ಎಂದು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೊಖ್ರಿಯಾಲ್ ನಿಶಾಂಕ್ ತಿಳಿಸಿದ್ದಾರೆ

ನವದೆಹಲಿ: ಕೋವಿಡ್-19 ಸಾಂಕ್ರಾಮಿಕ ಕಾಯಿಲೆ ಕಾರಣದಿಂದ ಮುಂದೂಡಲ್ಪಟ್ಟಿರುವ ಕೇಂದ್ರೀಯ ಶಿಕ್ಷಕರ ಅರ್ಹತಾ ಪರೀಕ್ಷೆ ಮುಂದಿನ ವರ್ಷ ಜನವರಿ 31ರಂದು ನಡೆಯಲಿದೆ ಎಂದು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೊಖ್ರಿಯಾಲ್ ನಿಶಾಂಕ್ ತಿಳಿಸಿದ್ದಾರೆ. ಈ ಹಿಂದೆ ಜುಲೈ 5 ರಂದು ಪರೀಕ್ಷೆ ನಿಗಧಿಯಾಗಿತ್ತು.
14 ನೇ ಆವೃತ್ತಿಯ ಕೇಂದ್ರೀಯ ಶಿಕ್ಷಕರ ಅರ್ಹತಾ ಪರೀಕ್ಷೆ ಜುಲೈನಲ್ಲಿ ದೇಶಾದ್ಯಂತ 112 ನಗರಗಳಲ್ಲಿ ನಡೆಯಬೇಕಿತ್ತು. ಆದರೆ, ಆಡಳಿತಾತ್ಮಕ ಕಾರಣಗಳಿಂದ ಮುಂದೂಡಲ್ಪಟ್ಟಿದ್ದು, ಈ ಪರೀಕ್ಷೆಯನ್ನು ಇದೀಗ ಮುಂದಿನ ವರ್ಷದ ಜನವರಿ 31 ರಂದು ನಡೆಸಲಾಗುವುದು ಎಂದು ನಿಶಾಂಕ್ ಹೇಳಿದ್ದಾರೆ.
ಸಾಮಾಜಿಕ ಅಂತರ ಮತ್ತಿತರ ಸುರಕ್ಷತಾ ಕ್ರಮಗಳೊಂದಿಗೆ 135 ನಗರಗಳಲ್ಲಿ ಪರೀಕ್ಷೆಯನ್ನು ನಡೆಸಲಾಗುವುದು ಎಂದು ಪೊಖ್ರಿಯಾಲ್ ನಿಶಾಂಕ್ ತಿಳಿಸಿದ್ದಾರೆ.
ಕೋವಿಡ್-19 ಕಾರಣದಿಂದ ಪರೀಕ್ಷೆ ನಡೆಯುವ ನಗರದ ಬದಲಾವಣೆಗೆ ಅಸಂಖ್ಯಾತ ಅಭ್ಯರ್ಥಿಗಳಿಂದ ಮನವಿ ಸ್ವೀಕರಿಸಲಾಗಿದ್ದು, ಕೋವಿಡ್-19 ಕಾರಣದಿಂದಾಗಿ ಅಭ್ಯರ್ಥಿಗಳು ಎದುರಿಸುತ್ತಿರುವ ಕಷ್ಟವನ್ನು ಗಮನದಲ್ಲಿಟ್ಟುಕೊಂಡು ಕೇಂದ್ರೀಯ ಶಿಕ್ಷಕರ ಅರ್ಹತಾ ಪರೀಕ್ಷೆಯಲ್ಲಿ ಪರೀಕ್ಷೆಯಲ್ಲಿ ಹಾಜರಾಗಲು ಬಯಸುವ ಅಭ್ಯರ್ಥಿಗಳಿಗೆ ನಗರದ ಆಯ್ಕೆಯಲ್ಲಿ ತಿದ್ದುಪಡಿ ಮಾಡಿಕೊಳ್ಳಲು ಒಂದು ಬಾರಿ ಅವಕಾಶ ನೀಡಲು ಸಿಬಿಎಸ್‌ಇ ನಿರ್ಧರಿಸಿದೆ ಎಂದು ಮಂಡಳಿಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


