'ಪೊಲೀಸರು ನನಗೆ ಹೊಡೆದಿದ್ದಾರೆ': ಬಂಧನಕ್ಕೀಡಾದ ನಂತರ ಅರ್ನಬ್ ಗೋಸ್ವಾಮಿ ಪ್ರತಿಕ್ರಿಯೆ
ತಮ್ಮನ್ನು ಬಂಧಿಸುವ ಮುನ್ನ ಪೊಲೀಸರು ದೈಹಿಕವಾಗಿ ಹಲ್ಲೆ ನಡೆಸಿದ್ದಾರೆ ಎಂದು ರಿಪಬ್ಲಿಕ್ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿ ಆರೋಪಿಸಿದ್ದಾರೆ.

ಮುಂಬೈ/ರಾಯ್ ಗಢ್: ತಮ್ಮನ್ನು ಬಂಧಿಸುವ ಮುನ್ನ ಪೊಲೀಸರು ದೈಹಿಕವಾಗಿ ಹಲ್ಲೆ ನಡೆಸಿದ್ದಾರೆ ಎಂದು ರಿಪಬ್ಲಿಕ್ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿ ಆರೋಪಿಸಿದ್ದಾರೆ.
2018ರಲ್ಲಿ ಇಂಟೀರಿಯರ್ ಡಿಸೈನರ್ ಅನ್ವಯ್ ನಾಯಕ್ ಅವರ ಆತ್ಮಹತ್ಯೆಗೆ ಅರ್ನಬ್ ಗೋಸ್ವಾಮಿ ಪ್ರಚೋದನೆ ನೀಡಿದ್ದರು ಎಂಬ ಆರೋಪದ ಮೇಲೆ ಇಂದು ಬೆಳಗ್ಗೆ ಅವರ ನಿವಾಸಕ್ಕೆ ದಾಳಿ ನಡೆಸಿದ ಮುಂಬೈ ಪೊಲೀಸರು ಅವರನ್ನು ಬಂಧಿಸಿ ಪೊಲೀಸ್ ಠಾಣೆಗೆ ಕರೆದುಕೊಂಡು ಹೋದರು.
ರಾಯ್ ಗಢ ಜಿಲ್ಲೆಯ ಅಲಿಬೌಗ್ ಪೊಲೀಸ್ ಠಾಣೆಗೆ ಪೊಲೀಸ್ ವಾಹನದಲ್ಲಿ ಕರೆತರುವ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅರ್ನಬ್ ಗೋಸ್ವಾಮಿ, ನನ್ನ ಮೇಲೆ ಪೊಲೀಸರು ದೈಹಿಕ ಹಲ್ಲೆ ನಡೆಸಿದ್ದಾರೆ ಎಂದರು.
ಆದರೆ ಪೊಲೀಸರು ಕಾನೂನು ಪ್ರಕಾರ ಕೆಲಸ ಮಾಡುತ್ತಾರೆ ಎಂದು ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ ಮಖ್ ಹೇಳುತ್ತಾರೆ. ಕಾನೂನಿಗಿಂತ ಮೇಲೆ ಯಾರೂ ಅಲ್ಲ, ಮಹಾರಾಷ್ಟ್ರ ಪೊಲೀಸರು ಕಾನೂನು ಪ್ರಕಾರ ನಡೆದುಕೊಳ್ಳುತ್ತಾರೆ ಎಂದರು.
ಅರ್ನಬ್ ಗೋಸ್ವಾಮಿ ತಮಗೆ ಬಾಕಿ ಹಣವನ್ನು ನೀಡಿರಲಿಲ್ಲ ಎಂದು ಆರೋಪಿಸಿ ಡೆತ್ ನೋಟ್ ಬರೆದಿಟ್ಟು 2018ರ ಮೇ ತಿಂಗಳಲ್ಲಿ ಇಂಟೀರಿಯರ್ ಡಿಸೈನರ್ ಅನ್ವಯ್ ನಾಯಕ್ ಮತ್ತು ಅವರ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದರು.ಪ್ರಕರಣ ಸಂಬಂಧ ಅರ್ನಬ್ ವಿರುದ್ಧ ಎಫ್ಐಆರ್ ಕೂಡ ದಾಖಲಾಗಿತ್ತು.
2019ರಲ್ಲಿ ಸಲ್ಲಿಸಿದ ಮುಚ್ಚಳಿಕೆ ವರದಿಯಲ್ಲಿ ನಾಯಕ್ ಅವರ ಪತ್ನಿ ಅಕ್ಷತಾ ಕೇಸನ್ನು ಮತ್ತೆ ತಂದು ಕೋರ್ಟ್ ಮೊರೆ ಹೋದರು. ಕಳೆದ ಸೆಪ್ಟೆಂಬರ್ ನಲ್ಲಿ ಪ್ರಕರಣದ ಮರು ತನಿಖೆ ನಡೆಸುವಂತೆ ಗೃಹ ಸಚಿವ ಅನಿಲ್ ದೇಶ್ ಮುಖ್ ಆರೋಪಿಸಿದ್ದರು. ನಾಯಕ್ ಪುತ್ರಿ ಅದ್ನ್ಯ ನಾಯಕ್ ಹೊಸದಾಗಿ ದೂರು ಸಲ್ಲಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


