ಗುಜರಾತ್: ಪ್ರಬಲ ಸ್ಫೋಟದ ನಂತರ ಗೋದಾಮು ಕುಸಿದು 9 ಮಂದಿ ದುರ್ಮರಣ
ಪ್ರಬಲ ಸ್ಫೋಟದ ನಂತರ ರಾಸಾಯನಿಕ ಗೋದಾಮಿನ ಒಂದು ಭಾಗ ಕುಸಿದು ಮೂವರು ಮಹಿಳೆಯರು ಸೇರಿದಂತೆ 9 ಮಂದಿ ಮೃತಪಟ್ಟಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಅಹಮದಾಬಾದ್: ಪ್ರಬಲ ಸ್ಫೋಟದ ನಂತರ ರಾಸಾಯನಿಕ ಗೋದಾಮಿನ ಒಂದು ಭಾಗ ಕುಸಿದು ಮೂವರು ಮಹಿಳೆಯರು ಸೇರಿದಂತೆ 9 ಮಂದಿ ಮೃತಪಟ್ಟಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಅಹಮದಾಬಾದ್ ನಗರದ ಹೊರವಲಯದಲ್ಲಿರುವ ಕೈಗಾರಿಕಾ ಪ್ರದೇಶದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಇತರ ಒಂಬತ್ತು ಮಂದಿ ಗಾಯಗೊಂಡಿರುವುದಾಗಿ ಅವರು ಹೇಳಿದ್ದಾರೆ.
ಸ್ಫೋಟದ ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಅಗ್ನಿ ಶಾಮಕ ಸಿಬ್ಬಂದಿ, ಅವಶೇಷಗಳಡಿಯಲ್ಲಿ ಸಿಲುಕಿದ್ದ 18 ಮಂದಿಯನ್ನು ಹೊರಗೆ ಎಳೆದು 108 ಅಂಬ್ಯುಲೆನ್ಸ್ ಮೂಲಕ ಎಲ್ ಜಿ ಆಸ್ಪತ್ರೆಗೆ ದಾಖಲಿಸಿರುವುದಾಗಿ ಅಗ್ನಿ ಶಾಮಕದ ಮುಖ್ಯಾಧಿಕಾರಿ ಎಂಎಫ್ ದಸ್ತೂರ್ ತಿಳಿಸಿದ್ದಾರೆ.
18 ಮಂದಿಯ ಪೈಕಿ 9 ಮಂದಿ ಸಾವನ್ನಪ್ಪಿರುವುದಾಗಿ ಆಸ್ಪತ್ರೆ ತಿಳಿಸಿದೆ. ಮೃತರೆಲ್ಲರೂ ಕಾರ್ಮಿಕರಾಗಿದ್ದಾರೆ. ಉಳಿದಿರುವ ಒಂಬತ್ತು ಮಂದಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆಸ್ಪತ್ರೆ ಹೇಳಿಕೆಯಲ್ಲಿ ತಿಳಿಸಿದೆ. ಘಟನೆ ಬಗ್ಗೆ ಪ್ರಾಥಮಿಕ ತನಿಖೆಯನ್ನು ಆರಂಭಿಸಿರುವುದಾಗಿ ಉಪ ಪೊಲೀಸ್ ಆಯುಕ್ತ ಅಶೋಕ್ ಮುನಿಯಾ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


