ದೇಶ

ಕೋವಿಡ್-19: ದೇಶಾದ್ಯಂತ 24 ಗಂಟೆಗಳಲ್ಲಿ 46,254 ಕೇಸ್ ಪತ್ತೆ, ಸೋಂಕಿತರ ಸಂಖ್ಯೆ 83 ಲಕ್ಷ

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 46,254 ಮಂದಿಯಲ್ಲಿ ಹೊಸದಾಗಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 83 ಲಕ್ಷ ಗಡಿ ದಾಟಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಬುಧವಾರ ಮಾಹಿತಿ ನೀಡಿದೆ.

ಕೋವಿಡ್-19: ದೇಶಾದ್ಯಂತ 24 ಗಂಟೆಗಳಲ್ಲಿ 46,254 ಕೇಸ್ ಪತ್ತೆ, ಸೋಂಕಿತರ ಸಂಖ್ಯೆ 83 ಲಕ್ಷ
ಸಂಗ್ರಹ ಚಿತ್ರ
Published On :

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 46,254 ಮಂದಿಯಲ್ಲಿ ಹೊಸದಾಗಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 83 ಲಕ್ಷ ಗಡಿ ದಾಟಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಬುಧವಾರ ಮಾಹಿತಿ ನೀಡಿದೆ. 

ಒಂದೇ ದಿನ 46,254 ಮಂದಿಯಲ್ಲಿ ಸೋಂಕು ಪತ್ತೆಯಾಗುವುದರೊಂದಿಗೆ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 83,13,877ಕ್ಕೆ ಏರಿಕೆಯಾಗಿದೆ ಎಂದು ವರದಿಯಲ್ಲಿ ತಿಳಿಸಿದೆ. 

ಇನ್ನು 24 ಗಂಟೆಗಳಲ್ಲಿ 514 ಮಂದಿ ಸಾವಿನ್ನಪ್ಪಿದ್ದು, ಸಾವಿನ ಸಂಖ್ಯೆ ಕೂಡ 1,23,611 ಕ್ಕೆ ತಲುಪಿದೆ. 83,13,877 ಮಂದಿ ಒಟ್ಟು ಸೋಂಕಿತರ ಪೈಕಿ ನಿನ್ನೆ ಒಂದೇ ದಿನ 53,357 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದು, ಈ ವರೆಗೂ 76,56,478  ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಪ್ರಸ್ತುತ ದೇಶದಲ್ಲಿ 5,33,787 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ತಿಳಿದುಬಂದಿದೆ. 

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 12,09,609 ಸ್ಯಾಂಪಲ್ಸ್ ಗಳನ್ನು ಪರೀಕ್ಷೆ ನಡೆಸಲಾಗಿದ್ದು, ಇದರೊಂದಿಗೆ ದೇಶದಲ್ಲಿ ಈ ವರೆಗೂ 11,29,98,959 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ (ಐಸಿಎಂಆರ್) ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.