ಪಶ್ಚಿಮ ಬಂಗಾಳದಲ್ಲಿ ಮುಕ್ತ, ನ್ಯಾಯಸಮ್ಮತ ಚುನಾವಣೆ ನಡೆಯುವುದಾಗಿ ಅಮಿತ್ ಶಾ ಭರವಸೆ: ಬಿಜೆಪಿ
ಮುಂದಿನ ವರ್ಷ ಏಪ್ರಿಲ್ ತಿಂಗಳಲ್ಲಿ ಮುಕ್ತ ಹಾಗೂ ನ್ಯಾಯ ಸಮ್ಮತದಿಂದ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ನಡೆಯುವುದಾಗಿ ಕೇಂದ್ರ ಸರ್ಕಾರ ಖಚಿತಪಡಿಸುವುದಾಗಿ ಪಶ್ಚಿಮ ಬಂಗಾಳದಲ್ಲಿನ ಪಕ್ಷದ ಮುಖಂಡರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭರವಸೆ ನೀಡಿರುವುದಾಗಿ ಮೂಲಗಳಿಂದ ತಿಳಿದುಬಂದಿದೆ.

ಕೊಲ್ಕತ್ತಾ: ಮುಂದಿನ ವರ್ಷ ಏಪ್ರಿಲ್ ತಿಂಗಳಲ್ಲಿ ಮುಕ್ತ ಹಾಗೂ ನ್ಯಾಯ ಸಮ್ಮತದಿಂದ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ನಡೆಯುವುದಾಗಿ ಕೇಂದ್ರ ಸರ್ಕಾರ ಖಚಿತಪಡಿಸುವುದಾಗಿ ಪಶ್ಚಿಮ ಬಂಗಾಳದಲ್ಲಿನ ಪಕ್ಷದ ಮುಖಂಡರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭರವಸೆ ನೀಡಿರುವುದಾಗಿ ಮೂಲಗಳಿಂದ ತಿಳಿದುಬಂದಿದೆ.
ಬಿಜೆಪಿಯ ಆಂತರಿಕ ಸಭೆಯಲ್ಲಿ ಮಾತನಾಡಿರುವ ಅಮಿತ್ ಶಾ, ಪಕ್ಷವು ತೃಣಮೂಲ ಕಾಂಗ್ರೆಸ್ ನ್ನು ಪದಚ್ಯುತಿಗೊಳಿಸಲು ಹಾಗೂ ಮುಂದಿನ ಸರ್ಕಾರ ರಚಿಸುವ ನಿಟ್ಟಿನಲ್ಲಿ ಶ್ರಮ ವಹಿಸುವಂತೆ ರಾಜ್ಯ ಘಟಕದ ಮುಖಂಡರಿಗೆ ಸೂಚನೆ ನೀಡಿದ್ದಾರೆ.
ಸಂಘಟನೆಯನ್ನು ಬಲಪಡಿಸಲು ಮತ್ತು ಕೇಂದ್ರದ ಜನ ಪರವಾದ ನೀತಿಗಳನ್ನು ಸಾಮಾನ್ಯ ಜನರಿಗೆ ತಿಳಿಸುವಂತೆ ನೋಡಿಕೊಳ್ಳಬೇಕೆಂದು ಅವರು ಪಕ್ಷದ ಕಾರ್ಯಕರ್ತರಿಗೆ ತಿಳಿಸಿದ್ದಾರೆ.
ಪಶ್ಚಿಮ ಬಂಗಾಳ ಚುನಾವಣೆ ಸಂದರ್ಭದಲ್ಲಿ ಹಿಂಸೆಯ ಬಗ್ಗೆ ಕೆಲ ಜನರು ಭಯಭೀತರಾಗಿದ್ದಾರೆ. ಮುಕ್ತ ಹಾಗೂ ನ್ಯಾಯ ಸಮ್ಮತದಿಂದ ಚುನಾವಣೆ ನಡೆಯುವುದಾಗಿ ಕೇಂದ್ರ ಸರ್ಕಾರ ಖಾತ್ರಿಪಡಿಸುತ್ತದೆ ಎಂದು ಅಮಿತ್ ಶಾ ಸಭೆಯಲ್ಲಿ ಹೇಳಿದ್ದು, ಮುಂದೆ ಬಿಜೆಪಿ ಸರ್ಕಾರ ರಚನೆಯಾಗಲು ಶ್ರಮ ವಹಿಸುವಂತೆ ತಿಳಿಸಿರುವುದಾಗಿ ರಾಜ್ಯ ಹಿರಿಯ ಮುಖಂಡರೊಬ್ಬರು ಸಭೆಯ ಬಳಿಕ ಮಾಹಿತಿ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


