ದೇಶ

35 ದಿನಗಳಿಂದೀಚೆಗೆ ಹೊಸ ಕೊರೊನಾ ಪ್ರಕರಣಗಳಿಗಿಂತ ಚೇತರಿಕೆ ಪ್ರಕರಣಗಳೇ ಅಧಿಕ

ಕಳೆದ ಐದು ವಾರಗಳಿಂದೀಚೆಗೆ ಇದೇ ಪ್ರವೃತ್ತಿ ಮುಂದುವರಿದಿದೆ ಎಂದು ವಿಶ್ಲೇಷಿಸಲಾಗಿದೆ.ಈ ಅಂಶ ಅತ್ಯಂತ ಮಹತ್ವದ ಪಾತ್ರ ವಹಿಸಿರುವುದರಿಂದ ಸಕ್ರಿಯ ಪ್ರಕರಣಗಳ ಸಂಖ್ಯೆ ಸದ್ಯ 5.16ಲಕ್ಷಕ್ಕೆ ಇಳಿಕೆಯಾಗಿದೆ.

35 ದಿನಗಳಿಂದೀಚೆಗೆ ಹೊಸ ಕೊರೊನಾ ಪ್ರಕರಣಗಳಿಗಿಂತ ಚೇತರಿಕೆ ಪ್ರಕರಣಗಳೇ ಅಧಿಕ
ಸಂಗ್ರಹ ಚಿತ್ರ
Published On :

ನವದೆಹಲಿ: ಭಾರತದಲ್ಲಿ ಕಳೆದ ಒಂದು ತಿಂಗಳಿಂದ ಕೊರೊನಾ ಸೋಂಕು ಪ್ರಕರಣಗಳಿಗಿಂತ ಗುಣಮಖರ ಸಂಖ್ಯೆ ಅಧಿಕವಾಗಿದೆ.ಕಳೆದ 24 ಗಂಟೆಗಳಲ್ಲಿ 50,356 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದರೆ ಅದಕ್ಕೆ ವ್ಯತಿರಿಕ್ತವಾಗಿ 53,920 ಸೋಂಕಿತರು ಗುಣಮುಖರಾಗಿದ್ದಾರೆ.

ಕಳೆದ ಐದು ವಾರಗಳಿಂದೀಚೆಗೆ ಇದೇ ಪ್ರವೃತ್ತಿ ಮುಂದುವರಿದಿದೆ ಎಂದು ವಿಶ್ಲೇಷಿಸಲಾಗಿದೆ.ಈ ಅಂಶ ಅತ್ಯಂತ ಮಹತ್ವದ ಪಾತ್ರ ವಹಿಸಿರುವುದರಿಂದ ಸಕ್ರಿಯ ಪ್ರಕರಣಗಳ ಸಂಖ್ಯೆ ಸದ್ಯ 5.16ಲಕ್ಷಕ್ಕೆ ಇಳಿಕೆಯಾಗಿದೆ.

ಕಳೆದ ಐದು ವಾರಗಳಿಂದೀಚೆಗೆ ಪ್ರತಿ ದಿನ ಸರಾಸರಿ ಸೋಂಕು ಪ್ರಕರಣಗಳ ಸಂಖ್ಯೆ ನಿರಂತರವಾಗಿ ಇಳಿಕೆಯಾಗುತ್ತಿದೆ. ಪ್ರತಿ ದಿನ ಸರಾಸರಿ ಹೊಸ ಸೋಂಕು ಪ್ರಕರಣಗಳು ಅಕ್ಟೋಬರ್ ಮೊದಲ ವಾರದಲ್ಲಿ 73,000ಕ್ಕೂ ಅಧಿಕವಿತ್ತು. ಇದೀಗ ಆ ಪ್ರಮಾಣ ಪ್ರತಿ ದಿನ ಸರಾಸರಿ 46,000ಕ್ಕೆ ಇಳಿಕೆಯಾಗಿದೆ.

ಅಂತೆಯೇ ಸುಸ್ಥಿರ ರೀತಿಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆಯೂ ಸಹ ಇಳಿಕೆಯಾಗುತ್ತಿದ್ದು, ಇಂದು ಆ ಪ್ರಮಾಣ 5,16,632ಕ್ಕೆ ಇಳಿದಿದೆ. ಈ ಅಂಕಿ-ಅಂಶ ವನ್ನು ಗಮನಿಸಿದರೆ ಭಾರತದಲ್ಲಿ ಸದ್ಯ ಒಟ್ಟಾರೆ ಪಾಸಿಟಿವ್ ಪ್ರಕರಣಗಳಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ಶೇ. 6.11ರಷ್ಟು ಮಾತ್ರ ಇದೆ.

ದೇಶದಲ್ಲಿ ಒಟ್ಟಾರೆ ಗುಣಮುಖರಾಗುತ್ತಿರುವವರ ಸಂಖ್ಯೆ 78,19,886ಕ್ಕೆ ಏರಿಕೆಯಾಗಿದ್ದು, ಇದರಿಂದಾಗಿ ರಾಷ್ಟ್ರೀಯ ಚೇತರಿಕೆ ಪ್ರಮಾಣ ಶೇ.92.41 ತಲುಪಿದೆ. ಇನ್ನು ಸದ್ಯ ಸಕ್ರಿಯ ಪ್ರಕರಣಗಳು ಮತ್ತು ಗುಣಮುಖರಾಗಿರುವ ಪ್ರಕರಣಗಳ ನಡುವಿನ ಅಂತರ 73,03,254 ಇದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.