ದೇಶ

ಕೋವಿಡ್-19: ದೇಶಾದ್ಯಂತ 24 ಗಂಟೆಗಳಲ್ಲಿ 50,357 ಕೇಸ್ ಪತ್ತೆ, ಸೋಂಕಿತರ ಸಂಖ್ಯೆ 84.62 ಲಕ್ಷ

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 50,357 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 84,62,081ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶನಿವಾರ ಮಾಹಿತಿ ನೀಡಿದೆ.

ಕೋವಿಡ್-19: ದೇಶಾದ್ಯಂತ 24 ಗಂಟೆಗಳಲ್ಲಿ 50,357 ಕೇಸ್ ಪತ್ತೆ, ಸೋಂಕಿತರ ಸಂಖ್ಯೆ 84.62 ಲಕ್ಷ
ಸಂಗ್ರಹ ಚಿತ್ರ
Published On :

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 50,357 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 84,62,081ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶನಿವಾರ ಮಾಹಿತಿ ನೀಡಿದೆ. 

ಇನ್ನು ಒಂದೇ ದಿನ 577 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಕೂಡ 1,25,562ಕ್ಕೆ ತಲುಪಿದೆ ಎಂದು ಸಚಿವಾಲಯ ತಿಳಿಸಿದೆ. 

ಈ ನಡುವೆ ಒಟ್ಟು 84,62,081 ಮಂದಿ ಸೋಂಕಿತರ ಪೈಕಿ ನಿನ್ನೆ ಒಂದೇ ದಿನ 53,920 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ದೇಶದಲ್ಲಿ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 78,19,887ಕ್ಕೆ ಏರಿಕೆಯಾಗಿದೆ. ಪ್ರಸ್ತುತ ದೇಶದಲ್ಲಿನ್ನೂ 5,16,632 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದರಂತೆ ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 11,13,209 ಸ್ಯಾಂಪಲ್ಸ್ ಗಳನ್ನು ಪರೀಕ್ಷೆ ನಡೆಸಲಾಗಿದ್ದು, ಇದರೊಂದಿಗೆ ದೇಶದಲ್ಲಿ ಈ ವರೆಗೂ 11,65,42,304 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ (ಐಸಿಎಂಆರ್) ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.