ದೇಶ

ಕೇಂದ್ರ ಮಾಹಿತಿ ಆಯೋಗದ ಮುಖ್ಯಸ್ಥರಾಗಿ ಯಶವರ್ಧನ್ ಕುಮಾರ್ ಸಿನ್ಹಾ ಅಧಿಕಾರ ಸ್ವೀಕಾರ 

ಕೇಂದ್ರ ಮಾಹಿತಿ ಆಯೋಗದ ಮುಖ್ಯಸ್ಥರಾಗಿ ಶನಿವಾರ ಯಶವರ್ದನ್ ಕುಮಾರ್ ಸಿನ್ಹಾ ಅಧಿಕಾರ ವಹಿಸಿಕೊಂಡಿದ್ದಾರೆ.ಇಂದು ಬೆಳಗ್ಗೆ ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸಿನ್ಹಾ ಅವರಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.

ಕೇಂದ್ರ ಮಾಹಿತಿ ಆಯೋಗದ ಮುಖ್ಯಸ್ಥರಾಗಿ ಯಶವರ್ಧನ್ ಕುಮಾರ್ ಸಿನ್ಹಾ ಅಧಿಕಾರ ಸ್ವೀಕಾರ 
ರಾಷ್ಟ್ರಪತಿ ಭವನದಲ್ಲಿ ಇಂದು ಬೆಳಗ್ಗೆ ನಡೆದ ಕಾರ್ಯಕ್ರಮದಲ್ಲಿ ಅಧಿಕಾರ ಸ್ವೀಕಾರ
Published On :

ನವದೆಹಲಿ: ಕೇಂದ್ರ ಮಾಹಿತಿ ಆಯೋಗದ ಮುಖ್ಯಸ್ಥರಾಗಿ ಶನಿವಾರ ಯಶವರ್ಧನ್ ಕುಮಾರ್ ಸಿನ್ಹಾ ಅಧಿಕಾರ ವಹಿಸಿಕೊಂಡಿದ್ದಾರೆ.

ಇಂದು ಬೆಳಗ್ಗೆ ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸಿನ್ಹಾ ಅವರಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. 

ಬಿಮಲ್ ಜುಲ್ಕಾ ಅವರ ಅಧಿಕಾರಾವಧಿ ಕಳೆದ ಆಗಸ್ಟ್ 26ಕ್ಕೆ ಪೂರ್ಣಗೊಂಡ ನಂತರ ಎರಡು ತಿಂಗಳು ಹುದ್ದೆ ಖಾಲಿಯಾಗಿತ್ತು. 

62 ವರ್ಷದ ಯಶವರ್ಧನ್ ಕುಮಾರ್ ಸಿನ್ಹಾ ಮಾಜಿ ರಾಯಭಾರಿಯಾಗಿದ್ದು ಕಳೆದ ವರ್ಷ ಜನವರಿ 1ರಂದು ಕೇಂದ್ರ ಮಾಹಿತಿ ಆಯೋಗಕ್ಕೆ ಸೇರಿದ್ದರು. ಕೇಂದ್ರ ಮಾಹಿತಿ ಆಯೋಗದ ಮುಖ್ಯಸ್ಥರಾಗಿ ಇನ್ನು ಮೂರು ವರ್ಷಗಳ ಕಾಲ ಅವರ ಅಧಿಕಾರಾವಧಿ ಇರುತ್ತದೆ.

ಇಂಗ್ಲೆಂಡ್ ಮತ್ತು ಶ್ರೀಲಂಕಾಗಳಿಗೆ ಭಾರತದ ಹೈಕಮಿಷನರ್ ಆಗಿಯೂ ಯಶವರ್ಧನ್ ಸೇವೆ ಸಲ್ಲಿಸಿದ್ದರು. 

ಕೇಂದ್ರ ಮಾಹಿತಿ ಆಯೋಗದ ಆಯುಕ್ತರಾಗಿ ನೇಮಕಗೊಳ್ಳುವವರು 5 ವರ್ಷ ಅಥವಾ ಅವರು 65 ವರ್ಷ ಹೊಂದುವವರೆಗೆ ಅಧಿಕಾರದಲ್ಲಿರುತ್ತಾರೆ. 

ಕೇಂದ್ರ ಮಾಹಿತಿ ಆಯೋಗದಲ್ಲಿ ಪ್ರಧಾನಿ ನರೇಂದ್ರ ಮೋದಿ, ಲೋಕಸಭೆಯ ಕಾಂಗ್ರೆಸ್ ನಾಯಕ ಅದಿರ್ ರಂಜನ್ ಚೌಧರಿ, ಗೃಹ ಸಚಿವ ಅಮಿತ್ ಶಾ ಸದಸ್ಯರಾಗಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.