ದೇಶವಾಸಿಗಳಿಗೆ 'ಜೀವಂತ ಸ್ಫೂರ್ತಿ': ಎಲ್.ಕೆ.ಅಡ್ವಾಣಿ ಜನ್ಮದಿನಕ್ಕೆ ಪ್ರಧಾನಿ ಮೋದಿ ಶುಭಾಶಯ
ಬಿಜೆಪಿಯ ಹಿರಿಯ ನಾಯಕಎಲ್ ಕೆ ಅಡ್ವಾಣಿಯವರ 93 ನೇ ಹುಟ್ಟುಹಬ್ಬದಂದು ಪ್ರಧಾನಿ ನರೇಂದ್ರ ಮೋದಿ ಶುಭ ಕೋರಿದ್ದಾರೆ. "ಹಿರಿಯರಾದ ಅಡ್ವಾಣಿ ಬಿಜೆಪಿ ಕಾರ್ಯಕರ್ತರಿಗೆ ಮತ್ತು ದೇಶವಾಸಿಗಳಿಗೆ ಜೀವಂತ ಸ್ಫೂರ್ತಿ" ಎಂದು ಅವರು ಹೇಳಿದ್ದಾರೆ.

ನವದೆಹಲಿ: ಬಿಜೆಪಿಯ ಹಿರಿಯ ನಾಯಕಎಲ್ ಕೆ ಅಡ್ವಾಣಿಯವರ 93 ನೇ ಹುಟ್ಟುಹಬ್ಬದಂದು ಪ್ರಧಾನಿ ನರೇಂದ್ರ ಮೋದಿ ಶುಭ ಕೋರಿದ್ದಾರೆ. "ಹಿರಿಯರಾದ ಅಡ್ವಾಣಿ ಬಿಜೆಪಿ ಕಾರ್ಯಕರ್ತರಿಗೆ ಮತ್ತು ದೇಶವಾಸಿಗಳಿಗೆ ಜೀವಂತ ಸ್ಫೂರ್ತಿ" ಎಂದು ಅವರು ಹೇಳಿದ್ದಾರೆ.
ಹಿಂದಿ ಭಾಷೆಯಲ್ಲಿ ಮಾಡಿದ ಟ್ವೀಟ್‌ನಲ್ಲಿ ಮೋದಿ, ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಸರ್ಕಾರದಲ್ಲಿ ಗೃಹ ಸಚಿವ ಮತ್ತು ಉಪ ಪ್ರಧಾನ ಮಂತ್ರಿಯಾಗಿದ್ದ ಅಡ್ವಾಣಿ ದೇಶದ ಅಭಿವೃದ್ಧಿಯಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ ಮತ್ತು ಪಕ್ಷವನ್ನು ಜನಸಾಮಾನ್ಯರತ್ತ ಕೊಂಡೊಯ್ದಿದ್ದಾರೆ. ಕೋಟ್ಯಂತರ ಬಿಜೆಪಿ ಕಾರ್ಯಕರ್ತರಿಗೆ ಮತ್ತು ದೇಶವಾಸಿಗಳಿಗೆ ಅವರು "ಜೀವಂತ ಸ್ಫೂರ್ತಿ" ಎಂದಿದ್ದಾರೆ.
ಇದೇ ವೇಳೆ ಅಡ್ವಾಣಿಯವರ ದೀರ್ಘ ಮತ್ತು ಆರೋಗ್ಯಕರ ಜೀವನಕ್ಕಾಗಿ ಹಾರೈಸಿದ್ದಾರೆ.
ಅಡ್ವಾಣಿ ಬಿಜೆಪಿಯ ದೀರ್ಘಕಾಲ ಸೇವೆ ಸಲ್ಲಿಸಿದ ಅಧ್ಯಕ್ಷರಾಗಿದ್ದು, ತಮ್ಮ ಪಕ್ಷವು ರಾಷ್ಟ್ರರಾಜಕಾರಣದಲ್ಲಿ ಹೆಮ್ಮರವಾಗಿ ಬೆಳೆಯಲು 90 ರ ದಶಕದಲ್ಲಿ ಅಧಿಕಾರಕ್ಕೆ ಬರಲು ಮಹತ್ವದ ಕೊಡುಗೆ ಸಲ್ಲಿಸಿದ್ದಾರೆ.
ಎಲ್.ಕೆ.ಅಡ್ವಾಣಿ ಜನ್ಮದಿನ: ಮುಖ್ಯಮಂತ್ರಿ, ಸಚಿವರಿಂದ ಶುಭಾಶಯ
ಬೆಂಗಳೂರು: ಬಿಜೆಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ಅವರ ಜನ್ಮ ದಿನದ ಪ್ರಯುಕ್ತ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿ ಅನೇಕ ಗಣ್ಯರು ಶುಭ ಕೋರಿದ್ದಾರೆ.
ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿ, ಪಕ್ಷದ ಹಿರಿಯ ನೇತಾರ, ಮಾಜಿ ಉಪಪ್ರಧಾನಮಂತ್ರಿ, ಪದ್ಮವಿಭೂಷಣ ಲಾಲ್ ಕೃಷ್ಣ ಅಡ್ವಾಣಿಯವರಿಗೆ ಜನ್ಮದಿನದ ಆದರ ಪೂರ್ವಕ ಶುಭಾಶಯಗಳು. ದೇವರ ಅನುಗ್ರಹ ಸದಾ ಇರಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಶುಭ ಹಾರೈಸಿದ್ದಾರೆ.
ಸಚಿವ ಶ್ರೀರಾಮುಲು ಶುಭ ಕೋರಿ, ಮುತ್ಸದ್ಧಿ ರಾಜಕಾರಣಿ, ಭಾರತದ 7ನೇ ಉಪ ಪ್ರಧಾನಿ, ತತ್ವನಿಷ್ಠ ನಾಯಕ, ಭಾರತೀಯ ಜನತಾ ಪಕ್ಷದ ಅಗ್ರಗಣ್ಯ ನೇತಾರರಲ್ಲೊಬ್ಬರಾದ ಎಲ್ ಕೆ ಅಡ್ವಾಣಿ ಅವರಿಗೆ ಜನ್ಮದಿನದ ಶುಭಾಶಯಗಳು ಎಂದು ಟ್ವೀಟ್ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


