ಬಿಹಾರ ಚುನಾವಣಾ ಫಲಿತಾಂಶ: ಘೋಷಣೆಗೂ ಮೊದಲೇ ಸೋಲಿಗೆ ಕೊರೋನಾ ಕಾರಣ ಎಂದ ಜೆಡಿಯು ವಕ್ತಾರ
ಬಿಹಾರ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕ್ರಿಯೆ ಚಾಲ್ತಿಯಲ್ಲಿದ್ದು, ನಿತೀಶ್ ಕುಮಾರ್ ನೇತೃತ್ವದ ಎನ್ ಡಿಎ ಮೈತ್ರಿಕೂಟ ಮತ್ತು ತೇಜಸ್ವಿ ಯಾದವ್ ರ ಮಹಾ ಘಟ್ ಬಂಧನ್ ನಡುವೆ ತೀವ್ರ ಹಣಾಹಣಿ ಏರ್ಪಟ್ಟಿರುವಂತೆಯೇ ಇತ್ತ ಜೆಡಿಯು ಮುಖಂಡರೊಬ್ಬರು ತಮ್ಮ ಪಕ್ಷದ ಸೋಲಿಗೆ ಕೊರೋನಾ ವೈರಸ್ ಸಾಂಕ್ರಾಮಿಕ ಕಾರಣ ಎಂದು ಹೇಳಿ ಸುದ್ದಿಗೆ ಗ್ರಾಸವಾಗಿದ್ದಾರೆ.

ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕ್ರಿಯೆ ಚಾಲ್ತಿಯಲ್ಲಿದ್ದು, ನಿತೀಶ್ ಕುಮಾರ್ ನೇತೃತ್ವದ ಎನ್ ಡಿಎ ಮೈತ್ರಿಕೂಟ ಮತ್ತು ತೇಜಸ್ವಿ ಯಾದವ್ ರ ಮಹಾ ಘಟ್ ಬಂಧನ್ ನಡುವೆ ತೀವ್ರ ಹಣಾಹಣಿ ಏರ್ಪಟ್ಟಿರುವಂತೆಯೇ ಇತ್ತ ಜೆಡಿಯು ಮುಖಂಡರೊಬ್ಬರು ತಮ್ಮ ಪಕ್ಷದ ಸೋಲಿಗೆ ಕೊರೋನಾ ವೈರಸ್ ಸಾಂಕ್ರಾಮಿಕ ಕಾರಣ ಎಂದು ಹೇಳಿ ಸುದ್ದಿಗೆ ಗ್ರಾಸವಾಗಿದ್ದಾರೆ.
ಮತ ಎಣಿಕೆ ಕಾರ್ಯದ ಆರಂಭದಲ್ಲಿ ತೇಜಸ್ವಿ ಯಾದವ್ ರ ಮಹಾಘಟ್ ಬಂಧನ್ ಮುನ್ನಡೆ ಪಡೆದಿತ್ತು. ಈ ಬೆಳವಣಿಗೆ ಬೆನ್ನಲ್ಲೇ ಬಿಹಾರದ ಆಡಳಿತಾರೂಢ ಜೆಡಿಯು ಪಕ್ಷದ ವಕ್ತಾರ ಕೆ.ಸಿ.ತ್ಯಾಗಿ ಹಾಲಿ ಚುನಾವಣೆಯಲ್ಲಿ ತಮ್ಮ ಪಕ್ಷದ ಸೋಲಿಗೆ ಕೋವಿಡ್ ಕಾರಣ ಎಂದು ಹೇಳಿಕೆ ನೀಡಿದ್ದಾರೆ.
'ನಾವು ಜನರ ನಿರ್ಧಾರ ಸ್ವಾಗತಿಸುತ್ತೇವೆ. ನಾವು ತೇಜಸ್ವಿ ಯಾದವ್ ಅಥವಾ ಆರ್‌ಜೆಡಿಯಿಂದ ಸೋಲಲಿಲ್ಲ. ಆದರೆ ದೇಶಕ್ಕೆ ಅಂಟಿದ ಶಾಪದಿಂದ (ಕೋವಿಡ್) ಸೋತೆವು' ಎಂದು ಮಾಧ್ಯಮವೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ಹೇಳಿಕೆ ನೀಡಿದ್ದಾರೆ. ಅಂತೆಯೇ 'ಬಿಹಾರದಲ್ಲಿ ಕಳೆದ 70 ವರ್ಷಗಳಿಂದ ಏನೆಲ್ಲಾ ಆಗಿತ್ತೋ ಅದಕ್ಕೆ ನಾವು ಬೆಲೆ ತೆತ್ತಿದ್ದೇವೆ. ಕೋವಿಡ್ ಕಾರಣದಿಂದ ನಾವು ಹಿನ್ನಡೆ ಅನುಭವಿಸುತ್ತಿದ್ದೇವೆ' ಎಂದು ಹೇಳಿದ್ದಾರೆ.
ಇಂದು ಬೆಳಗ್ಗೆ ಮತ ಎಣಿಕೆ ಆರಂಭವಾದ ಕ್ಷಣದಿಂದ ಸ್ಪಷ್ಟ ಮುನ್ನಡೆ ಸಾಧಿಸಿದ್ದ ಮಹಾಘಟಬಂಧನ್ ಮೈತ್ರಿಕೂಟಕ್ಕೆ ಇದೀ ಎನ್‌ಡಿಎ ಯಶಸ್ವಿಯಾಗಿ ತಿರುಗೇಟು ನೀಡುತ್ತಿದೆ. ಇತ್ತೀಚಿನ ವರದಿಗಳು ಬಂದಾಗ ಎನ್ ಡಿಎ ಮೈತ್ರಿಕೂಟ 125 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಮಹಾಘಟ್ ಬಂಧನ್ 102 ಕ್ಷೇತ್ರಗಳಳ್ಲಿ ಮುನ್ನಡೆ ಸಾಧಿಸಿದೆ. ಚಿರಾಗ್ ಪಾಸ್ವಾನ್ ರ ಎಲ್ ಜೆಪಿ 7 ಕ್ಷೇತ್ರಗಳಲ್ಲಿ ಮತ್ತು ಇತರರು 9 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


