ಉಪ ಚುನಾವಣೆ 2020: ಗೆಲುವಿನ ಖಾತೆ ತೆರೆದ ಬಿಜೆಪಿ, ಮಣಿಪುರದ ಸಿಂಗಾಟ್ ನಲ್ಲಿ ಜಯ
ಉಪ ಚುನಾವಣೆ 2020ರಲ್ಲಿ ಭಾರತೀಯ ಜನತಾ ಪಾರ್ಟಿ ತನ್ನ ಮೊದಲ ಗೆಲುವಿನ ಖಾತೆ ತೆರೆದಿದ್ದು, ಮಣಿಪುರದ ಸಿಂಗಾಟ್ ನಲ್ಲಿ ಬಿಜೆಪಿ ಅಭ್ಯರ್ಥಿ ಜಯ ದಾಖಲಿಸಿದ್ದಾರೆ.

ನವದೆಹಲಿ: ಉಪ ಚುನಾವಣೆ 2020ರಲ್ಲಿ ಭಾರತೀಯ ಜನತಾ ಪಾರ್ಟಿ ತನ್ನ ಮೊದಲ ಗೆಲುವಿನ ಖಾತೆ ತೆರೆದಿದ್ದು, ಮಣಿಪುರದ ಸಿಂಗಾಟ್ ನಲ್ಲಿ ಬಿಜೆಪಿ ಅಭ್ಯರ್ಥಿ ಜಯ ದಾಖಲಿಸಿದ್ದಾರೆ.
ಇಂದು ಬಿಹಾರ ವಿಧಾನಸಭೆ ಚುನಾವಣೆ ಜೊತೆಗೇ, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ತೆರವಾಗಿದ್ದ ವಿವಿಧ ಕ್ಷೇತ್ರಗಳ ಉಪಚುನಾವಣೆಯ ಮತ ಎಣಿಕೆಯೂ ಇಂದು ನಡೆಯುತ್ತಿದೆ. ಈ ಉಪ ಚುನಾವಣೆಯಲ್ಲಿ ಮಣಿಪುರದ ಸಿಂಗಾಟ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿಗೆ ಮೊದಲ ಜಯ ಲಭ್ಯವಾಗಿರುವುದಾಗಿ ಚುನಾವಣಾ ಆಯೋಗ ಘೋಷಿಸಿದೆ. ಮಣಿಪುರದ ಐದು ಉಪ ಚುನಾವಣಾ ಕ್ಷೇತ್ರಗಳ ಪೈಕಿ ಸಿಂಗಾಟ್ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ಜಿನ್ಸುವಾನ್ಹೌ ಜಯಗಳಿಸಿದ್ದಾರೆ ಎಂದು ತಿಳಿದುಬಂದಿದೆ.
ಚುನಾವಣಾ ಆಯೋಗದ ಅಂಕಿಅಂಶಗಳ ಪ್ರಕಾರ, ಬಿಜೆಪಿ ಅಭ್ಯರ್ಥಿ ಗಿನ್ಸುವಾನ್ಹೌ ಅವರನ್ನು ಸಿಂಗಾಟ್‌ನಿಂದ ವಿಜೇತರೆಂದು ಘೋಷಿಸಲಾಗಿದ್ದು, ವಾಂಗೋಯಿ ಕ್ಷೇತ್ರದಲ್ಲಿ ಓನಮ್ ಲುಖೋಯ್ ಸಿಂಗ್ ಅವರು 268 ಮತಗಳ ಅಂತರದಿಂದ ನ್ಯಾಶನಲ್ ಪೀಪಲ್ಸ್ ಪಾರ್ಟಿ (ಎನ್‌ಪಿಪಿ) ಅಭ್ಯರ್ಥಿ ಖುರೈಜಮ್ ಲೋಕನ್ ಸಿಂಗ್ ವಿರುದ್ಧ ಜಯಗಳಿಸಿದ್ದಾರೆ ಎಂದು ತಿಳಿದುಬಂದಿದೆ.
ಅಂತೆಯೇ ಕಾಂಗ್ರೆಸ್‌ನ ಮೊಯಿರಾಂಗ್ಥೆಮ್ ಹೇಮಂತ ಸಿಂಗ್ ಅವರು ವಾಂಗ್‌ಜಿಂಗ್ ಟೆಂಥಾ ಕ್ಷೇತ್ರದಲ್ಲಿ ಬಿಜೆಪಿಯ ಪಾವೊಮ್ ಬ್ರೋಜೆನ್ ಸಿಂಗ್ ವಿರುದ್ಧ 675 ಮತಗಳ ಅಂತರದ ಮುನ್ನಡೆ ಕಾಯ್ದುಕೊಂಡಿದ್ದಾರೆ.
ನವೆಂಬರ್ 7 ರಂದು ರಾಜ್ಯದ ಲಿಲಾಂಗ್, ವಾಂಗ್‌ಜಿಂಗ್ ಟೆಂಥಾ ಮತ್ತು ಸೈತು ಸೇರಿದಂತೆ ಐದು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆದಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


