ಗುಜರಾತ್ ಉಪ ಚುನಾವಣೆ: ಎಂಟೂ ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ; ಮುಂದಿನ ಚುನಾವಣೆಯ ಟ್ರೇಲರ್ ಇದು ಎಂದ ಸಿಎಂ ವಿಜಯ್ ರೂಪಾನಿ!
ಕರ್ನಾಟಕದಂತೆಯೇ ಗುಜರಾತ್ ನಲ್ಲಿಯೂ ಉಪ ಚುನಾವಣಾ ಮತಎಣಿಕೆ ಕಾರ್ಯ ನಿರ್ಣಾಯಕ ಹಂತ ತಲುಪಿದ್ದು, ಗುಜರಾತ್ ನ ಎಂಟೂ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಮುನ್ನಡೆಯಲ್ಲಿದ್ದಾರೆ.

ಗಾಂಧಿನಗರ: ಕರ್ನಾಟಕದಂತೆಯೇ ಗುಜರಾತ್ ನಲ್ಲಿಯೂ ಉಪ ಚುನಾವಣಾ ಮತಎಣಿಕೆ ಕಾರ್ಯ ನಿರ್ಣಾಯಕ ಹಂತ ತಲುಪಿದ್ದು, ಗುಜರಾತ್ ನ ಎಂಟೂ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಮುನ್ನಡೆಯಲ್ಲಿದ್ದಾರೆ.
ಗುಜರಾತ್ ನ ಒಟ್ಟು 8 ವಿಧಾನಸಭಾ ಕ್ಷೇತ್ರಗಳಲ್ಲಿ ಉಪ ಚುನಾವಣೆ ಮತಎಣಿಕೆ ನಡೆಯುತ್ತಿದ್ದು, ಎಲ್ಲ ಎಂಟೂ ಕ್ಷೇತ್ರಗಳಲ್ಲಿಯೂ ಬಿಜೆಪಿ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದಾರೆ. ಅಬ್ದುಸಾ, ಕರ್ಜನ್, ಮೊರ್ಬಿ, ಗಡಾಡಾ, ಧಾರಿ, ಲಿಂಬ್ಡಿ, ಕಪ್ರಡಾ ಮತ್ತು ಡ್ಯಾಂಗ್ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಮುನ್ನಡೆಯಲ್ಲಿದ್ದಾರೆ. ಬೆಳಗ್ಗೆ 8 ಗಂಟೆಯಿಂದಲೇ ಮತಎಣಿಕೆ ಕಾರ್ಯ ಆರಂಭವಾಗಿದ್ದು, 8 ಕ್ಷೇತ್ರಗಳಿಂದ 81 ಅಭ್ಯರ್ಥಿಗಳು ಹಾಲಿ ಚುನಾವಣಾ ಕಣದಲ್ಲಿ ತಮ್ಮ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ.
ಗೆಲುವು ನಮ್ಮದೇ, ಮುಂದಿನ ಚುನಾವಣೆಯ ಟ್ರೈಲರ್ ಇದು: ಸಿಎಂ ರೂಪಾನಿ
ಇನ್ನು ಅತ್ತ ಎಲ್ಲ 8 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ ಬೆನ್ನಲ್ಲೇ ಈ ಕುರಿತು ಗಾಂಧಿನಗರದಲ್ಲಿ ಪ್ರತಿಕ್ರಿಯೆ ನೀಡಿದ ಸಿಎಂ ವಿಜಯ್ ರೂಪಾನಿ, ಎಲ್ಲ 8 ಕ್ಷೇತ್ರಗಳಲ್ಲಿಯೂ ಬಿಜೆಪಿ ಅಭ್ಯರ್ಥಿಗಳು ಗೆಲುವಿನ ಸನಿಹದಲ್ಲಿದ್ದಾರೆ. ಎಲ್ಲರೂ ಜಯ ಗಳಿಸಲಿದ್ದಾರೆ ಎಂಬ ವಿಶ್ವಾಸ ತಮಗಿದೆ. ಹಾಲಿ ಉಪ ಚುನಾವಣೆ ಮುಂದಿನ ವಿಧಾನಸಭಾ ಚುನಾವಣೆಯ ಟ್ರೈಲರ್ ಆಗಿದ್ದು, ಮುಂದಿನ ಚುನಾವಣೆಯಲ್ಲೂ ಬಿಜೆಪಿ ಭರ್ಜರಿ ಜಯಗಳಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಈ ವರ್ಷದ ಜೂನ್ನಲ್ಲಿ ನಡೆದ ರಾಜ್ಯಸಭಾ ಚುನಾವಣೆಗೆ ಮುಂಚಿತವಾಗಿ ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡಿದ ನಂತರ ಗುಜರಾತ್ನಲ್ಲಿ ಉಪಚುನಾವಣೆ ಅಗತ್ಯವಾಗಿತ್ತು. ಈ ಪೈಕಿ ಐವರು ಶಾಸಕರು ನಂತರ ಆಡಳಿತಾರೂಢ ಬಿಜೆಪಿಗೆ ಸೇರಿದರು, ಇದೀಗ 2017 ರ ಚುನಾವಣೆಯಲ್ಲಿ ಅವರು ಗೆದ್ದ ಅದೇ ಸ್ಥಾನಗಳಿಂದ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


