ಬಿಹಾರದಲ್ಲಿ ನಿತೀಶ್ ಕುಮಾರ್ ನೇತೃತ್ವದಲ್ಲಿ ಮತ್ತೆ ಎನ್ ಡಿಎ ಸರ್ಕಾರ ಅಧಿಕಾರಕ್ಕೆ ಬರಲಿದೆ: ಜೆಡಿಯು
ಮುಖ್ಯಮಂತ್ರಿ ನಿತೀಶ್‌ಕುಮಾರ್ ನೇತೃತ್ವದಲ್ಲಿ ಎನ್‌ಡಿಎ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಜೆಡಿಯು ರಾಜ್ಯ ಘಟಕದ ಮುಖ್ಯಸ್ಥ ವಸಿಷ್ಠ ನಾರಾಯಣ್ ಸಿಂಗ್ ಹೇಳಿದ್ದಾರೆ.

ಪಾಟ್ನಾ: ಮುಖ್ಯಮಂತ್ರಿ ನಿತೀಶ್‌ಕುಮಾರ್ ನೇತೃತ್ವದಲ್ಲಿ ಎನ್‌ಡಿಎ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಜೆಡಿಯು ರಾಜ್ಯ ಘಟಕದ ಮುಖ್ಯಸ್ಥ ವಸಿಷ್ಠ ನಾರಾಯಣ್ ಸಿಂಗ್ ಹೇಳಿದ್ದಾರೆ.
ಚುನಾವಣಾ ಫಲಿತಾಂಶದ ಟ್ರೆಂಡ್ ನೋಡಿ ಮಾತನಾಡಿದ ಅವರು ‘ಇದನ್ನು ನಾನು ಬಹಳ ದಿನಗಳಿಂದಲೂ ಹೇಳುತ್ತಿದ್ದೇನೆ. ರಾಜ್ಯದಲ್ಲಿ ಎನ್‌ಡಿಎ ಮತ್ತೆ ಅಧಿಕಾರಕ್ಕೆ ಬರುವುದು ಖಚಿತವಾಗಿದೆ. ವಿರೋಧಪಕ್ಷಗಳು ಮತದಾರರನ್ನು ಓಲೈಸಲು ಪ್ರಚಾರ ಕಾರ್ಯವನ್ನು ದಾರಿ ತಪ್ಪಿಸಿದವು ಅಷ್ಟೆ’ ಎಂದು ಹೇಳಿದರು.
ಸರ್ಕಾರವನ್ನು ಮುನ್ನಡೆಸುವುದು ಬಿಜೆಪಿಯೋ ಅಥವಾ ಜೆಡಿಯು ಪಕ್ಷವೋ ಎಂದು ಕೇಳಿದ್ದಕ್ಕೆ ಸರ್ಕಾರವನ್ನು ಯಾರು ಮುನ್ನಡೆಸಬೇಕೆಂಬ ಬಗ್ಗೆ ಪ್ರಧಾನಮಂತ್ರಿ ಮೋದಿ, ಗೃಹ ಸಚಿವ ಅಮಿತ್‌ಶಾ ಮತ್ತು ಬಿಜೆಪಿ ಅಧ್ಯಕ್ಷ ನಡ್ಡಾ ಈ ಹಿಂದೆಯೇ ಸ್ಪಷ್ಟಪಡಿಸಿದ್ದಾರೆ ಎಂದರು.
ರಾಜ್ಯದಲ್ಲಿ ಎನ್‌ಡಿಎ ಜಯ ಸಾಧಿಸಿದರೆ ನಿತೀಶ್‌ಕುಮಾರ್ ಅವರೇ ಸರ್ಕಾರ ಮುನ್ನಡೆಸುವರು ಎಂದು ಮೂವರೂ ಸ್ಪಷ್ಟವಾಗಿ ಹೇಳಿದ್ದಾರೆ ಎಂದು ತಿಳಿಸಿದರು. 126 ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 73 ಜೆಡಿಯು 47 ಮತ್ತು ವಿಐಪಿ ಆರು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


