ದೇಶ

ಶ್ರೀರಾಮ ಜನ್ಮಭೂಮಿ ಟ್ರಸ್ಟ್ ಮುಖ್ಯಸ್ಥ ನೃತ್ಯ ಗೋಪಾಲ್ ದಾಸ್ ಗೆ ಎದೆ ನೋವು, ಲಖನೌ ಆಸ್ಪತ್ರೆಗೆ ದಾಖಲು

ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ಟ್ರಸ್ಟ್ ನ ಮುಖ್ಯಸ್ಥ ನೃತ್ಯ ಗೋಪಾಲ್ ದಾಸ್ ಗೆ ಎದೆ ನೋವು ಕಾಣಿಸಿಕೊಂಡಿದ್ದು, ಲಖನೌನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಶ್ರೀರಾಮ ಜನ್ಮಭೂಮಿ ಟ್ರಸ್ಟ್ ಮುಖ್ಯಸ್ಥ ನೃತ್ಯ ಗೋಪಾಲ್ ದಾಸ್ ಗೆ ಎದೆ ನೋವು, ಲಖನೌ ಆಸ್ಪತ್ರೆಗೆ ದಾಖಲು
ರಾಮ ಮಂದಿರ ಟ್ರಸ್ಟ್ ಮುಖ್ಯಸ್ಥ ಮಹಂತ್ ನೃತ್ಯ ಗೋಪಾಲ್ ದಾಸ್
Published On :

ಲಖನೌ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ಟ್ರಸ್ಟ್ ನ ಮುಖ್ಯಸ್ಥ ನೃತ್ಯ ಗೋಪಾಲ್ ದಾಸ್ ಗೆ ಎದೆ ನೋವು ಕಾಣಿಸಿಕೊಂಡಿದ್ದು, ಲಖನೌನಲ್ಲಿರುವ ಆಸ್ಪತ್ರೆಗೆ ದಾಖಲಿಸಲಾಗಿದೆ. 

82 ವರ್ಷದ ಸಂತ ಮಹಾಂತ್ ನೃತ್ಯ ಗೋಪಾಲ್ ದಾಸ್, ಕಾರ್ಡಿಯಾಲಜಿ ಪರೀಕ್ಷೆಗೆ ಒಳಪಡಲಿದ್ದಾರೆ.

ಆಗಸ್ಟ್ ತಿಂಗಳಲ್ಲಿ ನೃತ್ಯ ಗೋಪಾಲ್ ದಾಸ್ ಕೊರೋನಾ ವೈರಸ್ ಸೋಂಕು ತಗುಲಿತ್ತು. ಗುರುಗ್ರಾಮದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿದ್ದರು.

ಕೊರೋನಾ ವೈರಸ್ ನಿಂದ ಗುಣವಾದವರೂ ಸಹ ಹೃದಯ ಸಂಬಂಧಿ ಹಾಗೂ ಮೆದುಳು ಸ್ಟ್ರೋಕ್ ಗೆ ಸಂಬಂಧಿಸಿದ ಸಮಸ್ಯೆಗಳು ಕಾಣಿಸಿಕೊಳ್ಳಲಿವೆ ಎಂಬ ಅಧ್ಯಯನ ವರದಿ ಪ್ರಕಟವಾಗಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.