ಬಿಹಾರ ಚುನಾವಣೆ ಫಲಿತಾಂಶ: ಕೇವಲ 12 ಮತಗಳಿಂದ ಕ್ಷೇತ್ರವನ್ನು ಗೆದ್ದುಕೊಂಡ ಜೆಡಿಯು ಅಭ್ಯರ್ಥಿ
ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಆರ್ ಜೆಡಿ ನೇತೃತ್ವದ ಮಹಾಘಟಬಂಧನ್ ಬಿಜೆಪಿ ನೇತೃತ್ವದ ಎನ್ ಡಿಎಗೆ ಪ್ರಬಲ ಪೈಪೋಟಿ ನೀಡಿದ್ದು ಹಲವು ಕ್ಷೇತ್ರಗಳಲ್ಲಿ ನೇರಾ ನೇರ ಸ್ಪರ್ಧೆಯೊಡ್ಡಿತ್ತು.

ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಆರ್ ಜೆಡಿ ನೇತೃತ್ವದ ಮಹಾಘಟಬಂಧನ್ ಬಿಜೆಪಿ ನೇತೃತ್ವದ ಎನ್ ಡಿಎಗೆ ಪ್ರಬಲ ಪೈಪೋಟಿ ನೀಡಿದ್ದು ಹಲವು ಕ್ಷೇತ್ರಗಳಲ್ಲಿ ನೇರಾ ನೇರ ಸ್ಪರ್ಧೆಯೊಡ್ಡಿತ್ತು.
ಅತ್ಯಂತ ಕಡಿಮೆ ಮತಗಳ ಪೈಪೋಟಿ ಚುನಾವಣೆ ಫಲಿತಾಂಶದೆಡೆಗೆ ತೀವ್ರ ಕುತೂಹಲ ಮೂಡಿಸಿತ್ತು. ಕೇವಲ ಒಂದು ಮತ ಚುನಾವಣೆಯ ಫಲಿತಾಂಶವನ್ನು ಬುಡಮೇಲು ಮಾಡಬಹುದೆನ್ನುವ ಮಾತು ಬಿಹಾರ ವಿಧಾನಸಭಾ ಚುನಾವಣೆಯ ಹಲವು ಕ್ಷೇತ್ರಗಳಲ್ಲಿ ಮತ್ತೊಮ್ಮೆ ಸಾಬೀತಾಗಿದ್ದು, 12 ಮತಗಳಿಂದ ಜೆಡಿಯು ಪಕ್ಷದ ಓರ್ವ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ.
ಹಿಲ್ಸಾ ವಿಧಾನಸಭಾ ಕ್ಷೇತ್ರದ ಜೆಡಿಯು ಅಭ್ಯರ್ಥಿ 12 ಮತಗಳಿಂದ ಗೆದ್ದಿರುವುದನ್ನು ಚುನಾವಣಾ ಆಯೋಗ ವೆಬ್ ಸೈಟ್ ನಲ್ಲಿ ಪ್ರಕಟಿಸಿದೆ.
ಆದರೆ ಆರ್ ಜೆಡಿ ಈ ಫಲಿತಾಂಶವನ್ನು ಪ್ರಶ್ನಿಸಿದೆ. ಜೆಡಿಯು ಪಕ್ಷದ ಕೃಷ್ಣಮುರಾರಿ ಶರಣ್ ಅಥವಾ ಪ್ರೇಮ್ ಮುಖಿಯಾ ಅವರು 61,848 ಮತಗಳನ್ನು ಪಡೆದಿದ್ದರೆ ಆರ್ ಜೆಡಿ ಪಕ್ಷದ ಎದುರಾಳಿ ಅತ್ರಿ ಮುನಿ ಅಥವಾ ಶಕ್ತಿ ಸಿಂಗ್ ಯಾದವ್ 61,836 ಮತಗಳನ್ನು ಪಡೆದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


