ದೇಶ

ಕಸ್ಟಮ್ಸ್ ವಶಪಡಿಸಿಕೊಂಡಿದ್ದ ಪುರಾತನ ವಸ್ತು, ನಾಣ್ಯ ಹಸ್ತಾಂತರಿಸಿದ ನಿರ್ಮಲಾ ಸೀತಾರಾಮನ್

ಕೇಂದ್ರ ಹಣಕಾಸು ಮತ್ತು ಸಾಂಸ್ಥಿಕ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಭಾರತೀಯ ಕಸ್ಟಮ್ಸ್ ವಶಪಡಿಸಿಕೊಂಡಿದ್ದ ಪುರಾತನ ಮತ್ತು ಮಧ್ಯಕಾಲೀನ ಅವಧಿಯ ಪ್ರಾಚೀನ ವಸ್ತುಗಳು/ನಾಣ್ಯಗಳನ್ನು ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಸಚಿವ(ಸ್ವತಂತ್ರ ನಿರ್ವಹಣೆ) ಪ್ರಹ್ಲಾದ ಪಟೇಲ್ ಅವರಿಗೆ ನಾರ್ತ್ ಬ್ಲಾಕ್ ನಲ್ಲಿ ನಡೆದ ಸಮಾರಂಭದಲ್ಲಿಂದು ಹಸ್ತಾಂತರಿಸಿದರು.

ಕಸ್ಟಮ್ಸ್ ವಶಪಡಿಸಿಕೊಂಡಿದ್ದ ಪುರಾತನ ವಸ್ತು, ನಾಣ್ಯ ಹಸ್ತಾಂತರಿಸಿದ ನಿರ್ಮಲಾ ಸೀತಾರಾಮನ್
ನಿರ್ಮಲಾ ಸೀತಾರಾಮನ್
Published On :

ನವದೆಹಲಿ: ಕೇಂದ್ರ ಹಣಕಾಸು ಮತ್ತು ಸಾಂಸ್ಥಿಕ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಭಾರತೀಯ ಕಸ್ಟಮ್ಸ್ ವಶಪಡಿಸಿಕೊಂಡಿದ್ದ ಪುರಾತನ ಮತ್ತು ಮಧ್ಯಕಾಲೀನ ಅವಧಿಯ ಪ್ರಾಚೀನ ವಸ್ತುಗಳು/ನಾಣ್ಯಗಳನ್ನು ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಸಚಿವ (ಸ್ವತಂತ್ರ ನಿರ್ವಹಣೆ) ಪ್ರಹ್ಲಾದ ಪಟೇಲ್ ಅವರಿಗೆ ನಾರ್ತ್ ಬ್ಲಾಕ್ ನಲ್ಲಿ ನಡೆದ ಸಮಾರಂಭದಲ್ಲಿಂದು ಹಸ್ತಾಂತರಿಸಿದರು.

ಸುಲ್ತಾನರ ಮತ್ತು ಮೊಘಲರ ಕಾಲಕ್ಕೆ ಸೇರಿದ್ದು, ಕ್ರಿ.ಶ 1206 ರಿಂದ 1720 ರವರೆಗೆ, ರಾಜಪ್ರಭುತ್ವದ ರಾಜ್ಯಗಳಾದ ಕುಶಾನಾ, ಯೌಧೇಯ, ಗುಪ್ತರು, ಪ್ರತಿಹಾರ್, ಚೋಳರು, ರಜಪೂತರು, ಮೊಘಲರು, ಮರಾಠರು, ಕಾಶ್ಮೀರ ಮತ್ತು ಬ್ರಿಟಿಷರ ಆಳ್ವಿಕೆಯ ಭಾರತ, ಫ್ರೆಂಚ್ ಮತ್ತು ಕೆಲವು ಆಸ್ಟ್ರೇಲಿಯಾದ ಕ್ರಿ.ಶ 1800-1900ರ ಕಾಲದ 40,282 ನಾಣ್ಯಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿತ್ತು. 

ಮುಟ್ಟುಗೋಲು ಹಾಕಿಕೊಳ್ಳಲಾದ ವಸ್ತುಗಳಲ್ಲಿ 18 ಪ್ರಾಚೀನ ಮುದ್ರೆ/ಸ್ಟಾಂಪ್/ ರಾಜರ ಆದೇಶಗಳನ್ನು ಕಾರ್ಯಗತಗೊಳಿಸಲು ಆಡಳಿತಗಾರರಿಂದ ಅಧಿಕಾರ ಹೊಂದಿರುವ ವ್ಯಕ್ತಿಯು ಧರಿಸುವ ಧಾರ್ಮಿಕ ಲಾಂಛನ ಮತ್ತು ರಾಜಮನೆತನದ ಮಹಿಳೆಯರು ಧರಿಸುತ್ತಿದ್ದ 1 ಬೆಳ್ಳಿಯ ಡಾಬೂ ಸೇರಿದೆ.

ದೆಹಲಿ ವಿಮಾನ ನಿಲ್ದಾಣದಲ್ಲಿ 21.06.1994 ರಂದು ಹಾಂಕಾಂಗ್‌ ಗೆ ಪ್ರಯಾಣಿಸುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಕಸ್ಟಮ್ಸ್ ಅಧಿಕಾರಿಗಳು ತಡೆದು ಈ ಪುರಾತನ ನಾಣ್ಯಗಳು, ತಾಮ್ರದ ಸ್ಟಾಂಪ್/ಸೀಲುಗಳು, ಬೆಳ್ಳಿ ಡಾಬು ಮತ್ತು ಇತರ ಪ್ರಾಚೀನ ವಸ್ತುಗಳನ್ನು ವಶಪಡಿಸಿಕೊಂಡಿದ್ದರು. ನಂತರದ ಶೋಧನೆಯಲ್ಲಿ ಉಳಿದ ಚಿನ್ನದ ನಾಣ್ಯಗಳು ಮತ್ತು ವಸ್ತುಗಳನ್ನು ನಗರದ ಮನೆಯೊಂದರಿಂದ ವಶಪಡಿಸಿಕೊಳ್ಳಲಾಗಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.