ಕೋವಿಡ್-19: ದೇಶಾದ್ಯಂತ 24 ಗಂಟೆಗಳಲ್ಲಿ 44,281 ಹೊಸ ಕೇಸ್ ಪತ್ತೆ, ಸೋಂಕಿತರ ಸಂಖ್ಯೆ 86 ಲಕ್ಷ
ದೇಶದಲ್ಲಿ 24 ಗಂಟೆಗಳಲ್ಲಿ 44,281 ಹೊಸ ಕೇಸ್ ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 86,36,012ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಬುಧವಾರ ಮಾಹಿತಿ ನೀಡಿದೆ.

ನವದೆಹಲಿ: ದೇಶದಲ್ಲಿ 24 ಗಂಟೆಗಳಲ್ಲಿ 44,281 ಹೊಸ ಕೇಸ್ ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 86,36,012ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಬುಧವಾರ ಮಾಹಿತಿ ನೀಡಿದೆ.
ಇನ್ನು ಒಂದೇ ದಿನ 512 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಕೂಡ 1,27,571ಕ್ಕೆ ತಲುಪಿದೆ ಎಂದು ಸಚಿವಾಲಯ ತಿಳಿಸಿದೆ.
ದೇಶದಲ್ಲಿ ಪತ್ತೆಯಾಗಿರುವ ಒಟ್ಟು 86,36,012 ಮಂದಿ ಸೋಂಕಿತರ ಪೈಕಿ ನಿನ್ನೆ ಒಂದೇ ದಿನ 50,326 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಇದರೊಂದಿಗೆ ಗುಣಮುಖರ ಸಂಖ್ಯೆ 12,07,69,151ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಪ್ರಸ್ತುತ 4,94,657 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ನಡುವೆ ನಿನ್ನೆ ಒಂದೇ ದಿನ 11,53,294 ಸ್ಯಾಂಪಲ್ಸ್ ಗಳನ್ನು ಪರೀಕ್ಷೆ ನಡೆಸಲಾಗಿದ್ದು, ಇದರೊಂದಿಗೆ ದೇಶದಲ್ಲಿ ಈ ವರೆಗೂ 12,07,69,151 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ (ಐಸಿಎಂಆರ್) ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


