ಬಿಹಾರ ಚುನಾವಣೆ ಫಲಿತಾಂಶ: ಸ್ವಪಕ್ಷದ ವಿರುದ್ಧ ಕಾಂಗ್ರೆಸ್ ನಾಯಕ ತಾರೀಕ್ ಅನ್ವರ್ ಅಸಮಾಧಾನ
ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಕಳಪೆ ಪ್ರದರ್ಶನದಿಂದಾಗಿಯೇ ಮಹಾಘಟಬಂಧನ ಸರ್ಕಾರ ರಚನೆ ಸಾಧ್ಯತೆ ಕ್ಷೀಣಿಸಿದ್ದು ಎಂದು ಕಾಂಗ್ರೆಸ್ ನ ನಾಯಕ ತಾರೀಕ್ ಅನ್ವರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಕಳಪೆ ಪ್ರದರ್ಶನದಿಂದಾಗಿಯೇ ಮಹಾಘಟಬಂಧನ ಸರ್ಕಾರ ರಚನೆ ಸಾಧ್ಯತೆ ಕ್ಷೀಣಿಸಿದ್ದು ಎಂದು ಕಾಂಗ್ರೆಸ್ ನ ನಾಯಕ ತಾರೀಕ್ ಅನ್ವರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇದೇ ವೇಳೆ ಎಐಎಂಐಎಂ ಬಿಹಾರದಲ್ಲಿ ಪ್ರವೇಶಿಸಿರುವುದರ ಬಗ್ಗೆಯೂ ತೀವ್ರ ಆತಂಕವನ್ನು ತಾರೀಕ್ ಅನ್ವರ್ ಹೇಳಿದ್ದಾರೆ.
ಎಐಸಿಸಿ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಅನ್ವರ್, ಸರಣಿ ಟ್ವೀಟ್ ಗಳಲ್ಲಿ ಕಾಂಗ್ರೆಸ್ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದು, " ನಾವು ಸತ್ಯವನ್ನು ಒಪ್ಪಿಕೊಳ್ಳಬೇಕು, ಕಾಂಗ್ರೆಸ್ ನ ಕಳಪೆ ಪ್ರದರ್ಶನದಿಂದಾಗಿಯೇ ಬಿಹಾರದಲ್ಲಿ ಮಹಾಘಟಬಂಧನ್ ಸರ್ಕಾರದ ಕನಸು ಭಗ್ನಗೊಂಡಿದೆ. ತುರ್ತಾಗಿ ದೀರ್ಘವಾದ ಆತ್ಮಾವಲೋಕನ ಮಾಡಿಕೊಳ್ಳುವ ಅಗತ್ಯವಿದೆ ಎಂದು ಅನ್ವರ್ ಅಭಿಪ್ರಾಯಪಟ್ಟಿದ್ದಾರೆ.
ಬಿಜೆಪಿ ಹೇಗೆ ಹಿಂದೂಗಳನ್ನು ಬೆಂಬಲಿಸುತ್ತದೆಯೋ ಹಾಗೆಯೇ ಎಐಎಂಐಎಂ ಮುಸ್ಲಿಮರನ್ನು ಬೆಂಬಲಿಸುತ್ತದೆ. ಈ ಕಾರಣಕ್ಕಾಗಿ ಬಿಹಾರದಲ್ಲಿ ಎಐಎಂಐಎಂ ಉತ್ತಮ ಪ್ರದರ್ಶನ ನೀಡಿರುವುದು ಒಳ್ಳೆಯ ಲಕ್ಷಣವಲ್ಲ ಎಂದು ತಾರೀಕ್ ಅನ್ವರ್ ಆತಂಕ ವ್ಯಕ್ತಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


