ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಹಣ, ತೋಳ್ಬಲ, ವಂಚನೆಯಿಂದ ಎನ್ ಡಿಎ ಗೆಲುವು: ತೇಜಸ್ವಿ ಯಾದವ್
ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಆರ್ ಜೆಡಿ ರಾಜ್ಯದ ಜನರ ಬೆಂಬಲ ಗಳಿಸಿದೆ ಆದರೆ, ಎನ್ ಡಿಎ ಹಣ, ತೋಳ್ಬಲ ಮತ್ತು ವಂಚನೆಯ ಮೂಲಕ ಗೆಲುವು ಸಾಧಿಸಿದೆ ಎಂದು ರಾಷ್ಟ್ರೀಯ ಜನತಾ ದಳದ ಮುಖಂಡ ತೇಜಸ್ವಿ ಯಾದವ್ ಹೇಳಿದ್ದಾರೆ.

ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಆರ್ ಜೆಡಿ ರಾಜ್ಯದ ಜನರ ಬೆಂಬಲ ಗಳಿಸಿದೆ ಆದರೆ, ಎನ್ ಡಿಎ ಹಣ, ತೋಳ್ಬಲ ಮತ್ತು ವಂಚನೆಯ ಮೂಲಕ ಗೆಲುವು ಸಾಧಿಸಿದೆ ಎಂದು ರಾಷ್ಟ್ರೀಯ ಜನತಾ ದಳದ ಮುಖಂಡ ತೇಜಸ್ವಿ ಯಾದವ್ ಹೇಳಿದ್ದಾರೆ.
ನಿತೀಶ್ ಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ ತೇಜಸ್ವಿ ಯಾದವ್, ಜೆಡಿಯು ಮೂರನೇ ಸ್ಥಾನಕ್ಕೆ ತಳಲ್ಪಟ್ಟಿದ್ದು, ಒಂದು ವೇಳೆ ಅವರಿಗೆ ಆತ್ಮಸಾಕ್ಷಿ ಇದ್ದರೆ, ಮುಖ್ಯಮಂತ್ರಿ ಸ್ಥಾನವನ್ನು ತ್ಯಜಿಸಬೇಕು ಎಂದರು.
ಮಹಾಘಟ ಬಂಧನ್ ಕ್ಕಿಂತಲೂ ಕೇವಲ 12, 270 ಹೆಚ್ಚಿನ ಮತಗಳು ಹಾಗೂ 15 ಕ್ಕೂ ಹೆಚ್ಚಿನ ಸ್ಥಾನಗಳನ್ನು ಎನ್ ಡಿಎ ಮೈತ್ರಿಕೂಟ ಗಳಿಸಿರುವುದು ಅಶ್ಚರ್ಯಕರವಾಗಿದೆ ಎಂದು ತೇಜಸ್ವಿ ಯಾದವ್ ಹೇಳಿದರು.
ಚುನಾವಣಾ ಪ್ರಕ್ರಿಯೆ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಆರ್ ಜೆಡಿ ನಾಯಕ, ಆರಂಭದಲ್ಲಿ ಎಣಿಕೆ ಕಾರ್ಯ ಮಾಡದೆ ಕೊನೆಯಲ್ಲಿ ಮಾಡಲಾದ ಎಲ್ಲಾ ಕ್ಷೇತ್ರಗಳ ಅಂಚೆ ಮತಗಳನ್ನು ಮರು ಎಣಿಕೆ ಮಾಡಬೇಕೆಂದು ಒತ್ತಾಯಿಸಿದರು.
ಕಡಿಮೆ ಅಂತರದಲ್ಲಿ ನಾವು ಚುನಾವಣೆಯಲ್ಲಿ ಸೋತಿದ್ದೇವೆ. ಅನೇಕ ಕ್ಷೇತ್ರಗಳಲ್ಲಿ 900ಕ್ಕೂ ಹೆಚ್ಚು ಅಂಚೆ ಮತಗಳನ್ನು ಅಮಾನ್ಯ ಮಾಡಲಾಗಿದೆ ಎಂದು ತೇಜಸ್ವಿ ಯಾದವ್ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


