ದೇಶ

ಕೋವಿಡ್-19 ಗೆ ಉತ್ತರಾಖಂಡ ಬಿಜೆಪಿ ಶಾಸಕ ಸಾವು

ಮಾರಕ ಕೊರೋನಾ ವೈರಸ್ ಸೋಂಕಿಗೆ ಮತ್ತೋರ್ವ ಜನಪ್ರತಿನಿಧಿ ಬಲಿಯಾಗಿದ್ದು, ಸೋಂಕಿಗೆ ತುತ್ತಾಗಿದ್ದ ಉತ್ತರಾ ಖಂಡದ ಬಿಜೆಪಿ ಶಾಸಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

ಕೋವಿಡ್-19 ಗೆ ಉತ್ತರಾಖಂಡ ಬಿಜೆಪಿ ಶಾಸಕ ಸಾವು
ಉತ್ತರಾಖಂಡ ಬಿಜೆಪಿ ಶಾಸಕ ಸುರೇಂದ್ರ ಸಿಂಗ್ ಜೀನಾ
Published On :

ನವದೆಹಲಿ: ಮಾರಕ ಕೊರೋನಾ ವೈರಸ್ ಸೋಂಕಿಗೆ ಮತ್ತೋರ್ವ ಜನಪ್ರತಿನಿಧಿ ಬಲಿಯಾಗಿದ್ದು, ಸೋಂಕಿಗೆ ತುತ್ತಾಗಿದ್ದ ಉತ್ತರಾ ಖಂಡದ ಬಿಜೆಪಿ ಶಾಸಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

ಉತ್ತರಾಖಂಡ ರಾಜ್ಯದ ಅಲ್ಮೋರಾ ಜಿಲ್ಲೆಯ ಸಾಲ್ಟ್‌ ವಿಧಾನಸಭಾ ಕ್ಷೇತ್ರದ ಶಾಸಕರಾದ ಸುರೇಂದ್ರ ಸಿಂಗ್ ಜೀನಾ ಅವರು ಗುರುವಾರ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಮೂಲಗಳ ಪ್ರಕಾರ ಕಳೆದ 15 ದಿನಗಳ ಹಿಂದೆ ಸುರೇಂದ್ರ ಸಿಂಗ್ ಅವರಿಗೆ ಕೋವಿಡ್‌ ಸೋಂಕು ದೃಢಪಟ್ಟಿತ್ತು. ದೆಹಲಿಯ ಗಂಗಾರಾಮ್‌ ಆಸ್ಪತ್ರೆಗೆ ದಾಖಲಾಗಿ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಗುರುವಾರ ಬೆಳಗ್ಗೆ ಸುರೇಂದ್ರ ಸಿಂಗ್ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ  ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

ಕಳೆದ ಕೆಲ ದಿನಗಳ ಹಿಂದಷ್ಟೆ ಇವರ ಪತ್ನಿ ಕೂಡ ಹೃದಯಾಘಾತದಿಂದ ಮೃತಪಟ್ಟಿದ್ದರು ಎಂದು ಹೇಳಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.