ಕೊರೋನಾ ಲಸಿಕೆ: ಪ್ರಧಾನಿ ಮೋದಿ ಬದ್ಧತೆಗೆ ವಿಶ್ವ ಆರೋಗ್ಯ ಸಂಸ್ಥೆ ಮೆಚ್ಚುಗೆ
ಜಾಗತಿಕ ಪಿಡುಗಾಗಿರುವ ಮಾರಕ ಕೊರೋನಾ ಸಾಂಕ್ರಾಮಿಕ ಸೋಂಕಿನ ವಿರುದ್ಧದ ಭಾರತದ ಹೋರಾಟಕ್ಕೆ ವಿಶ್ವ ಆರೋಗ್ಯ ಸಂಸ್ಥೆ ಮೆಚ್ಚುಗೆ ವ್ಯಕ್ತಪಡಿಸಿದೆ.

ನವದೆಹಲಿ: ಜಾಗತಿಕ ಪಿಡುಗಾಗಿರುವ ಮಾರಕ ಕೊರೋನಾ ಸಾಂಕ್ರಾಮಿಕ ಸೋಂಕಿನ ವಿರುದ್ಧದ ಭಾರತದ ಹೋರಾಟಕ್ಕೆ ವಿಶ್ವ ಆರೋಗ್ಯ ಸಂಸ್ಥೆ ಮೆಚ್ಚುಗೆ ವ್ಯಕ್ತಪಡಿಸಿದೆ.
ಈ ಕುರಿತಂತೆ ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯಸ್ಥ ಟೆಡ್ರೋಸ್ ಅಧನೋಮ್ ಗೆಬ್ರೆಯೆಸಸ್ ಅವರು ಟ್ವೀಟ್ ಮಾಡಿದ್ದು, ಕೊರೋನಾ ಸೋಂಕಿನ ಹೋರಾಟ ಹಾಗೂ ಲಸಿಕೆ ತಯಾರಿಕೆಯಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ಬದ್ಧತೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಕೋವಿಡ್ ಕುರಿತಂತೆ ಪ್ರಧಾನಿ ಅವರೊಂದಿಗೆ ದೂರವಾಣಿ ಮೂಲಕ ಚರ್ಚೆ ನಡೆಸಿದ ಬಳಿಕ, ನರೇಂದ್ರ ಮೋದಿ ಅವರಿಗೆ ಧನ್ಯವಾದ ಹೇಳಿ ಟ್ವೀಟ್ ಮಾಡಿರುವ ಟೆಡ್ರೋಸ್ ಅಧನೋಮ್ ಅವರು, 'ಕೋವಿಡ್ ಸೋಂಕು ಜಗತ್ತಿಗೆ ಸವಾಲಾಗಿದೆ. ಪರಸ್ಪರ ಸಹಕಾರದೊಂದಿಗೆ ಮಾತ್ರ ಇದನ್ನು ಕೊನೆಗಾಣಿಸಲು ಸಾಧ್ಯ. ಕೋವಿಡ್ ವಿರುದ್ಧದ ಹೋರಾಟ, ಲಸಿಕೆ ತಯಾರಿಕೆ ಹಾಗೂ ಇತರ ದೇಶಗಳಿಗೆ ಪೂರೈಕೆ ಮಾಡಲು ಭಾರತ ತನ್ನ ಲಸಿಕೆ ಉತ್ಪಾದನಾ ಸಾಮರ್ಥ್ಯ ಬಳಕೆಯ ಬಗ್ಗೆ ತೋರುತ್ತಿರುವ ಬದ್ಧತೆಗೆ ಧನ್ಯವಾದಗಳು ಎಂದು ಟ್ವೀಟ್ ಮಾಡಿದ್ದಾರೆ.
ವೈದ್ಯ ವಿಜ್ಞಾನ ಹಾಗೂ ಔಷಧಿ ಕ್ಷೇತ್ರದಲ್ಲಿ ಪರಸ್ಪರ ಸಹಭಾಗಿತ್ವದ ಮೂಲಕ ಜ್ಞಾನ, ಸಂಶೋಧನೆಯ ವಿನಿಮಯ ಮತ್ತು ಪರಿಣಾಮಕಾರಿ ತರಬೇತಿಯೊಂದಿಗೆ ಸಾಂಕ್ರಾಮಿಕ ಪಿಡುಗಿನ ವಿರುದ್ಧ ಹೋರಾಟ ಮಾಡಬೇಕಿದೆ. ಈ ಬಗ್ಗೆ ಭಾರತ ಜಾಗತಿಕಮಟ್ಟದಲ್ಲಿ ನೆರವು ನೀಡಲಿದೆ ಎಂದು ಟ್ವೀಟ್ ಮಾಡಿದ್ದಾರೆ.
Namaste, Prime Minister @narendramodi, for a very productive call on how to strengthen our collaboration & advance access to knowledge, research and training in traditional medicine globally. @WHO welcomes India's
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


