ದೇಶ

ಕೋವಿಡ್-19: ದೇಶಾದ್ಯಂತ 24 ಗಂಟೆಗಳಲ್ಲಿ 47,905 ಕೇಸ್ ಪತ್ತೆ, ಸಕ್ರಿಯ ಪ್ರಕರಣಗಳ ಸಂಖ್ಯೆ 5 ಲಕ್ಷಕ್ಕೆ ಇಳಿಕೆ

ಕೊರೋನಾ ವೈರಸ್ ವಿರುದ್ಧದ ಹೋರಾಟದಲ್ಲಿ ಭಾರತ ಮತ್ತೊಂದು ಮೈಲಿಗಲ್ಲು ಸಾಧಿಸಿದ್ದು, ಸಕ್ರಿಯ ಕೊರೋನಾ ವೈರಸ್ ಪ್ರಕರಣಗಳ ಸಂಖ್ಯೆ 107 ದಿನಗಳ ಬಳಿಕ ಇದೇ ಮೊದಲ ಬಾರಿಗೆ 5 ಲಕ್ಷಕ್ಕಿಂತಲೂ ಕೆಳಗೆ ಇಳಿದಿದೆ.

ಕೋವಿಡ್-19: ದೇಶಾದ್ಯಂತ 24 ಗಂಟೆಗಳಲ್ಲಿ 47,905 ಕೇಸ್ ಪತ್ತೆ, ಸಕ್ರಿಯ ಪ್ರಕರಣಗಳ ಸಂಖ್ಯೆ 5 ಲಕ್ಷಕ್ಕೆ ಇಳಿಕೆ
ಸಂಗ್ರಹ ಚಿತ್ರ
Published On :

ನವದೆಹಲಿ: ಕೊರೋನಾ ವೈರಸ್ ವಿರುದ್ಧದ ಹೋರಾಟದಲ್ಲಿ ಭಾರತ ಮತ್ತೊಂದು ಮೈಲಿಗಲ್ಲು ಸಾಧಿಸಿದ್ದು, ಸಕ್ರಿಯ ಕೊರೋನಾ ವೈರಸ್ ಪ್ರಕರಣಗಳ ಸಂಖ್ಯೆ 107 ದಿನಗಳ ಬಳಿಕ ಇದೇ ಮೊದಲ ಬಾರಿಗೆ 5 ಲಕ್ಷಕ್ಕಿಂತಲೂ ಕೆಳಗೆ ಇಳಿದಿದೆ. 

ದೇಶದ ಒಟ್ಟಾರೆ ಕೊರೋನಾ ಪ್ರಕರಣಗಳ ಪೈಕಿ ಸಕ್ರಿಯ ಪ್ರಕರಣಗಳ ಪ್ರಮಾಣ ಶೇ.5.73ರಷ್ಟಿದೆ. ದೇಶದಲ್ಲಿ ಪ್ರಸ್ತುತ 4,89,294 ಸಕ್ರಿಯ ಪ್ರಕರಣಗಳಿವೆ. ಜು.28ರಂದು 4,96,988 ಸಕ್ರಿಯ ಪ್ರಕರಣಗಳು ದಾಖಲಾಗಿದ್ದವು. 

ಗುರುವಾರ ಮುಂಜಾನೆ 8 ಗಂಟೆಯ ಕೊನೆಗೊಂಡ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 47,905 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 86,83,917ಕ್ಕೆ ಏರಿಕೆಯಾಗಿದೆ. 

ಇನ್ನು ಒಂದೇ ದಿನ 550 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 1,28,121ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. 

ಈ ನಡುವೆ 80,66,502 ಮಂದಿ ಸೋಂಕಿತರ ಪೈಕಿ ನಿನ್ನೆ ಒಂದೇ ದಿನ 52,718 ಮಂದಿ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆಂದು ತಿಳಿಸಿದೆ. 

7,830 ಹೊಸ ಪ್ರಕರಣಗಳೊಂದಿಗೆ ದೈನಂದಿನ ಪ್ರಕರಣಗಳಲ್ಲಿ ದೆಹಲಿ ಮೊದಲ ಸ್ಥಾನದಲ್ಲಿಯೇ ಮುಂದುವರೆದಿದ್ದು, ನಂತರ ಸ್ಥಾನದಲ್ಲಿರುವ ಕೇರಳದಲ್ಲಿ 6,010 ಪ್ರಕರಣಗಳು ದಾಖಲಾಗಿವೆ. 50,326 ಮಂದಿ ಗುಣಮುಖರಾಗಿದ್ದು, ಕೊರೋನಾದಿಂದ ಚೇತರಿಸಿಕೊಂಡವರ ಸಂಖ್ಯೆ 80 ಲಕ್ಷ ಗಡಿ ದಾಟಿದೆ.     

ಈ ನಡುವೆ ನಿನ್ನೆ ಒಂದೇ ದಿನ 11,93,358 ಸ್ಯಾಂಪಲ್ಸ್ ಗಳನ್ನು ಪರೀಕ್ಷೆ ನಡೆಸಲಾಗಿದ್ದು, ಇದರೊಂದಿಗೆ ದೇಶದಲ್ಲಿ ಈ ವರೆಗೂ 12,19,62,509 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ (ಐಸಿಎಂಆರ್) ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.