ಪ್ರಧಾನಿ ಮೋದಿ ನಾಳೆ ಸೈನಿಕರೊಂದಿಗೆ ದೀಪಾವಳಿ ಆಚರಣೆ ಸಾಧ್ಯತೆ
ಪ್ರಧಾನಿ ನರೇಂದ್ರ ಮೋದಿ ನಾಳೆ ಸೈನಿಕರೊಂದಿಗೆ ದೀಪಾವಳಿ ಆಚರಿಸುವ ಸಾಧ್ಯತೆಯಿದೆ. ಅವರು ಅಧಿಕಾರಕ್ಕೆ ಬಂದ 2014ರಿಂದಲೂ ಈ ಸಂಪ್ರದಾಯವನ್ನು ಪ್ರತಿವರ್ಷ ಪಾಲಿಸಿಕೊಂಡು ಬಂದಿದ್ದಾರೆ.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನಾಳೆ ಸೈನಿಕರೊಂದಿಗೆ ದೀಪಾವಳಿ ಆಚರಿಸುವ ಸಾಧ್ಯತೆಯಿದೆ. ಅವರು 2014ರಲ್ಲಿ ಅಧಿಕಾರಕ್ಕೆ ಬಂದಾಗಿನಿಂದಲೂ ಈ ಸಂಪ್ರದಾಯವನ್ನು ಪ್ರತಿವರ್ಷ ಪಾಲಿಸಿಕೊಂಡು ಬಂದಿದ್ದಾರೆ.
ಪ್ರಧಾನಿ ಗುಜರಾತ್ ನಲ್ಲಿ ಇರಲಿದ್ದಾರೆ ಎಂದು ಕೆಲವು ವರದಿಗಳು ಹೇಳಿದರೆ, ಮತ್ತೆ ಕೆಲವು ವರದಿಗಳು, ರಾಜಸ್ಥಾನದ ಜೈಸಾಲ್ಮರ್ ಗೆ ತೆರಳಲಿದ್ದಾರೆ ಎಂದು ಮತ್ತೆ ತಿಳಿಸಿವೆ. ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಪ್ರಧಾನಿ ಜೊತೆಗೆ ಇರುವ ಸಾಧ್ಯತೆಯಿದೆ.
ನಿಯಂತ್ರಣ ರೇಖೆಯಲ್ಲಿ ದೇಶ ಕಾಯುತ್ತಿರುವ ಸೈನಿಕರೊಂದಿಗೆ ದೀಪಾವಳಿ ಆಚರಿಸಲು ಕಳೆದ ವರ್ಷ ಜಮ್ಮು- ಕಾಶ್ಮೀರದ ರಜೌರಿ ಜಿಲ್ಲೆಗೆ ಪ್ರಧಾನಿ ಮೋದಿ ಭೇಟಿ ನೀಡಿದ್ದರು. 2018ರಲ್ಲಿ ಉತ್ತರ್ ಖಂಡ್ ಗೆ ಭೇಟಿ ನೀಡಿದ್ದ ಪ್ರಧಾನಿ ಮೋದಿ, 2017ರಲ್ಲಿ ಉತ್ತರ ಕಾಶ್ಮೀರದ ಗುರೆಜ್ ವಲಯದಲ್ಲಿನ ಸೈನಿಕರೊಂದಿಗೆ ದೀಪಾವಳಿ ಆಚರಿಸಿದ್ದರು.
ಮೋದಿ ಪ್ರಧಾನಿಯಾದ ನಂತರ ಮೊದಲ ದೀಪಾವಳಿಯನ್ನು ವಿಶ್ವದ ಅತ್ಯುನ್ನತ ಯುದ್ಧಭೂಮಿ ಸಿಯಾಚಿನ್ ನಲ್ಲಿ ಸೈನಿಕರೊಂದಿಗೆ ಕಳೆದಿದ್ದರು. ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗಲೂ ಇದೇ ರೀತಿಯಲ್ಲಿ ಅವರು ದೀಪಾವಳಿಯನ್ನು ಆಚರಿಸುತ್ತಿದ್ದ ಬಗ್ಗೆ ವರದಿಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


