ದೇಶ

ಕೋವಿಡ್-19: ದೇಶಾದ್ಯಂತ 44,878 ಕೇಸ್ ಪತ್ತೆ, ಸೋಂಕಿತರ ಸಂಖ್ಯೆ 87 ಲಕ್ಷ

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 44,878 ಹೊಸ ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 87,28,795ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶುಕ್ರವಾರ ಮಾಹಿತಿ ನೀಡಿದೆ.

ಕೋವಿಡ್-19: ದೇಶಾದ್ಯಂತ 44,878 ಕೇಸ್ ಪತ್ತೆ, ಸೋಂಕಿತರ ಸಂಖ್ಯೆ 87 ಲಕ್ಷ
ಸಂಗ್ರಹ ಚಿತ್ರ
Published On :

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 44,878 ಹೊಸ ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 87,28,795ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶುಕ್ರವಾರ ಮಾಹಿತಿ ನೀಡಿದೆ. 

ಇನ್ನು ಒಂದೇ ದಿನ 547 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಕೂಡ 1,28,688ಕ್ಕೆ ತಲುಪಿದೆ ಎಂದು ಸಚಿವಾಲಯ ತಿಳಿಸಿದೆ.

ಈ ನಡುವೆ ನಿನ್ನೆ ಒಂದೇ ದಿನ 49,079 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು, ದೇಶದಲ್ಲಿ ಒಟ್ಟು ಗುಣಮುಖರ ಸಂಖ್ಯೆ 81,15,580ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಪ್ರಸ್ತುತ 4,84,547 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

ಇದರಂತೆ ನಿನ್ನೆ ಒಂದೇ ದಿನ  11,39,230 ಸ್ಯಾಂಪಲ್ಸ್ ಗಳನ್ನು ಪರೀಕ್ಷೆ ನಡೆಸಲಾಗಿದ್ದು, ಇದರೊಂದಿಗೆ ದೇಶದಲ್ಲಿ ಈ ವರೆಗೂ 12,31,01,739 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ (ಐಸಿಎಂಆರ್) ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.