ಯಾವುದೇ ಕಾರಣಕ್ಕೂ ನಿತೀಶ್ ಸಂಪುಟ ಸೇರುವುದಿಲ್ಲ: ಜಿತನ್ ರಾಮ್ ಮಾಂಜಿ
ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಹಿಂದೂಸ್ತಾನ್ ಆವಂ ಮೋರ್ಚಾ ಸಂಸ್ಥಾಪಕ ಜಿತನ್ ರಾಮ್ ಮಾಂಜಿ ಹೊಸ ಸರ್ಕಾರದ ಭಾಗವಾಗುವುದಿಲ್ಲ ಎಂದು ಹೇಳಿದ್ದಾರೆ

ಪಾಟ್ನಾ: ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಹಿಂದೂಸ್ತಾನ್ ಆವಂ ಮೋರ್ಚಾ ಸಂಸ್ಥಾಪಕ ಜಿತನ್ ರಾಮ್ ಮಾಂಜಿ ಹೊಸ ಸರ್ಕಾರದ ಭಾಗವಾಗುವುದಿಲ್ಲ ಎಂದು ಹೇಳಿದ್ದಾರೆ.
ಹೊಸದಾಗಿ ಆಯ್ಕೆಯಾದ ನಾಲ್ವರು ಶಾಸಕರು ಮಾಂಜಿ ಅವರ ನಿವಾಸದಲ್ಲಿ ಭೇಟಿಯಾದರು. ಈ ವೇಳೆ ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಯಿತು. ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಉತ್ತಮ ಪ್ರದರ್ಶನ ತೋರಿದ ಮಾಂಜಿ ಅವರ ಪಕ್ಷದ ಕಾರ್ಯಕರ್ತರಿಗೆ ಧನ್ಯವಾದ ಹೇಳಲಾಯಿತು.
ತಾವು ಈ ಹಿಂದೆ ಸಿಎಂ ಆಗಿದ್ದವರು ಹೀಗಾಗಿ ಯಾವುದೇ ಕಾರಣಕ್ಕೂ ನಿತೀಶ್ ಕುಮಾರ್ ಸಂಪುಟದಲ್ಲಿ ಸಚಿವರಾಗುವುದಿಲ್ಲ ಎಂದು ತಿಳಿಸಿದ್ದಾರೆ, ನೂತನ ಶಾಸಕರಿಗೆ ಪಕ್ಷದ ಕಾರ್ಯಕರ್ತರು ಅದ್ಧೂರಿ ಸ್ವಾಗತ ಕೋರಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


