ಬಿಜೆಪಿ ರಾಜ್ಯ ಉಸ್ತುವಾರಿಗಳ ನೇಮಕ: ಕರ್ನಾಟಕಕ್ಕೆ ಅರುಣ್ ಸಿಂಗ್, ಸಿಟಿ ರವಿ ಹೆಗಲಿಗೆ ಮೂರು ರಾಜ್ಯಗಳ ಹೊಣೆ
ಬಿಹಾರ ಚುನಾವಣೆ ಮತ್ತು ವಿವಿಧ ರಾಜ್ಯಗಳಲ್ಲಿ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದು, ಪಕ್ಷವನ್ನು ಮತ್ತಷ್ಟು ಬಲಗೊಳಿಸಲು ಮುಂದಾಗಿರುವ ಹೈ ಕಮಾಂಡ್ ರಾಜ್ಯಗಳ ಉಸ್ತುವಾರಿಯ ಹೊಸ ತಂಡವನ್ನು ಘೋಷಿಸಿದೆ.

ನವದೆಹಲಿ: ಬಿಹಾರ ಚುನಾವಣೆ ಮತ್ತು ವಿವಿಧ ರಾಜ್ಯಗಳಲ್ಲಿ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದು, ಪಕ್ಷವನ್ನು ಮತ್ತಷ್ಟು ಬಲಗೊಳಿಸಲು ಮುಂದಾಗಿರುವ ಹೈ ಕಮಾಂಡ್ ರಾಜ್ಯಗಳ ಉಸ್ತುವಾರಿಯ ಹೊಸ ತಂಡವನ್ನು ಘೋಷಿಸಿದೆ.
ಕರ್ನಾಟಕ ರಾಜ್ಯದ ಉಸ್ತುವಾರಿಯಾಗಿ ಅರುಣ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಉಪ ಉಸ್ತುವಾರಿಯಾಗಿ ಡಿಕೆ ಅರುಣಾ ಅವರನ್ನು ನೇಮಿಸಲಾಗಿದೆ.ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಇತ್ತೀಚೆಗಷ್ಟೇ ನೇಮಕಗೊಂಡು, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಪಕ್ಷದ ರಾಜ್ಯ ಮುಖಂಡ ಸಿ.ಟಿ. ರವಿ ಅವರಿಗೆ ತಮಿಳುನಾಡು, ಮಹಾರಾಷ್ಟ್ರ ಮತ್ತು ಗೋವಾ ರಾಜ್ಯಗಳ ಉಸ್ತುವಾರಿ ವಹಿಸಲಾಗಿದೆ.
ರಾಜ್ಯದ ಇನ್ನೊಬ್ಬ ಮುಖಂಡ ನಿರ್ಮಲಕುಮಾರ್ ಸುರಾನಾ ಅವರನ್ನು ನೆರೆಯ ಪುದುಚೇರಿಗೆ ನಿಯೋಜಿಸಲಾಗಿದೆ. ಇದುವರೆಗೆ ರಾಜ್ಯದ ಉಸ್ತುವಾರಿಯಾಗಿದ್ದ ಪಿ.ಮುರುಳೀಧರ ರಾವ್ ಅವರಿಗೆ ಮಧ್ಯಪ್ರದೇಶದ ಹೊಣೆ ವಹಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


