ದೆಹಲಿಯಲ್ಲಿ 24 ಗಂಟೆಗಳ ಅವಧಿಯಲ್ಲಿ 7340 ಹೊಸ ಸೋಂಕು ಪ್ರಕರಣಗಳು ಪತ್ತೆ..!
ಮಾರಕ ಕೊರೋನಾ ವೈರಸ್ ಸೋಂಕಿನ ಮೂರನೇ ಅಲೆ ಎದುರಿಸುತ್ತಿರುವ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇಂದು 7340 ಹೊಸ ಸೋಂಕು ಪ್ರಕರಣಗಳು ವರದಿಯಾಗಿವೆ.

ನವದೆಹಲಿ: ಮಾರಕ ಕೊರೋನಾ ವೈರಸ್ ಸೋಂಕಿನ ಮೂರನೇ ಅಲೆ ಎದುರಿಸುತ್ತಿರುವ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇಂದು 7340 ಹೊಸ ಸೋಂಕು ಪ್ರಕರಣಗಳು ವರದಿಯಾಗಿವೆ.
ಈ ಬಗ್ಗೆ ದೆಹಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದು, ದೆಹಲಿಯಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 7340 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದೆ. ಆ ಮೂಲಕ ದೆಹಲಿಯಲ್ಲಿನ ಒಟ್ಟಾರೆ ಸೋಂಕಿತರ ಸಂಖ್ಯೆ 4,82,170ಕ್ಕೆ ಏರಿಕೆಯಾಗಿದೆ. ಅಂತೆಯೇ ಕಳೆದ 24 ಗಂಟೆಗಳ ಅವಧಿಯಲ್ಲಿ ದೆಹಲಿಯಲ್ಲಿ 7117 ಸೋಂಕಿತರು ಗುಣಮುಖರಾಗಿದ್ದು. ಆ ಮೂಲಕ ಒಟ್ಟಾರೆ ಗುಣಮುಖರ ಸಂಖ್ಯೆ 4,30,195ಕ್ಕೆ ಏರಿಕೆಯಾಗಿದೆ.
ಇನ್ನು ದೆಹಲಿಯಲ್ಲಿ ಪ್ರಸ್ತುತ 44,456 ಸಕ್ರಿಯ ಪ್ರಕರಣಗಳಿವೆ. ಅಂತೆಯೇ ದೆಹಲಿಯಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 96 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ದೆಹಲಿಯಲ್ಲಿ ಸೋಂಕಿಗೆ ಬಲಿಯಾದವರ ಸಂಖ್ಯೆ 7519ಕ್ಕೆ ಏರಿಕೆಯಾಗಿದೆ.
ದೆಹಲಿಯಾದ್ಯಂತ ಕಳೆದ 24 ಗಂಟೆಗಳ ಅವಧಿಯಲ್ಲಿ 19,635 ಆರ್ ಟಿಪಿಸಿಆರ್ ಟೆಸ್ಟ್ ಗಳು ಮತ್ತು 30,010 ರ್ಯಾಪಿಡ್ ಆ್ಯಂಟಿ ಜೆನ್ ಟೆಸ್ಟ್ ಮಾಡಲಾಗಿದ್ದು, ಒಟ್ಟಾರೆ 54,28,472 ಕೋವಿಡ್ ಪರೀಕ್ಷೆ ನಡೆಸಲಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


